ಮಂಗಳೂರು:ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ದ.ಕ.ಜಿಲ್ಲೆಯಲ್ಲಿ ಒಟ್ಟು 3,421 ಮಂದಿ ಅಂತಿಮ ಕಣದಲ್ಲಿದ್ದಾರೆ.
ಜಿಲ್ಲೆಯ ಬೆಳ್ತಂಗಡಿ 46, ಪುತ್ತೂರು 22, ಸುಳ್ಯ 25 ಹಾಗೂ ಕಡಬ ತಾಲೂಕಿನ 21 ಗ್ರಾಮ ಪಂಚಾಯತಿಗಳಿಗೆ ಡಿಸೆಂಬರ್ 27ರಂದು 2ನೇ ಹಂತದ ಚುನಾವಣೆ ನಡೆಯಲಿದೆ. ಒಟ್ಟು 114 ಗ್ರಾಮ ಪಂಚಾಯಿತಿಗಳ 1,541 ಕ್ಷೇತ್ರಗಳಲ್ಲಿ 41 ಕ್ಷೇತ್ರಗಳಲ್ಲಿ ಅವಿರೋಧವಾಗಿ ಅಭ್ಯರ್ಥಿಗಳು ಆಯ್ಕೆಯಾಗಿದ್ದು, 1,500 ಕ್ಷೇತ್ರಗಳಿಗೆ ಮಾತ್ರ ಚುನಾವಣೆ ನಡೆಯಲಿದೆ.