ಕರ್ನಾಟಕ

karnataka

ETV Bharat / city

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ಕೊರೊನಾದಿಂದ 8 ಮಂದಿ ಸಾವು!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 180 ಮಂದಿಗೆ ಕೊರೊನಾ ದೃಢಪಟ್ಟಿದೆ. ಜಿಲ್ಲೆಯ ಒಟ್ಟು ಕೊರೊನಾ ಪ್ರಕರಣಗಳು 4,394 ಕ್ಕೆ ಏರಿಕೆಯಾಗಿದೆ. ಈವರೆಗೆ 1,987 ಮಂದಿ ಗುಣಮುಖರಾಗಿದ್ದು, ಸದ್ಯ 2,300 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Dakshina Kannada
ಮಂಗಳೂರು

By

Published : Jul 24, 2020, 8:44 PM IST

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೊರೊನಾದಿಂದಾಗಿ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಎಂಟು ಮಂದಿಯಲ್ಲಿ ಇಬ್ಬರು ಶಿವಮೊಗ್ಗದ ಭದ್ರಾವತಿಯವರಾಗಿದ್ದು, ಆರು ಮಂದಿ ದಕ್ಷಿಣ ಕನ್ನಡ ಜಿಲ್ಲೆಯವರಾಗಿದ್ದಾರೆ.

ಶಿವಮೊಗ್ಗದ ಭದ್ರಾವತಿಯ 67 ವರ್ಷದ ಇಬ್ಬರು ಪುರುಷರು, ಮಂಗಳೂರಿನ 44 ವರ್ಷದ ಪುರುಷ, 56 ವರ್ಷದ ಪುರುಷ, 75 ವರ್ಷದ ಮಹಿಳೆ, 65 ವರ್ಷದ ಮಹಿಳೆ, ಬಂಟ್ವಾಳದ 42 ವರ್ಷದ ಮಹಿಳೆ ಮತ್ತು ಪುತ್ತೂರಿನ 61 ವರ್ಷದ ಮಹಿಳೆ ಮೃತಪಟ್ಟವರು. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 107ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 180 ಮಂದಿಗೆ ಕೊರೊನಾ ದೃಢಪಟ್ಟಿದೆ. ಇದರಲ್ಲಿ ಪ್ರಾಥಮಿಕ ಸಂಪರ್ಕದಿಂದ 56, ಐಎಲ್ಐ ನಿಂದ 68, ಎಸ್​ಎಆರ್​ಐ ಪ್ರಕರಣದಿಂದ 10, ವಿದೇಶದಿಂದ ಬಂದ ಒಬ್ಬರಿಗೆ ಕೊರೊನಾ ದೃಢಪಟ್ಟಿದೆ. ಉಳಿದಂತೆ 45 ಮಂದಿಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ 4,394 ಮಂದಿಗೆ ಕೊರೊನಾ ದೃಢಪಟ್ಟಿದೆ. ಇಂದು 125 ಮಂದಿ ಗುಣಮುಖರಾಗಿದ್ದು, ಈವರೆಗೆ ಗುಣಮುಖರಾದವರ ಸಂಖ್ಯೆ 1,987 ಕ್ಕೆ ಏರಿಕೆಯಾಗಿದೆ. 2,300 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details