ಕರ್ನಾಟಕ

karnataka

ETV Bharat / city

ಉಜಿರೆ ಬಾಲಕನ ಅಪಹರಣ ಕೇಸ್; 17 ಕೋಟಿಗೆ ಬೇಡಿಕೆ ಇಟ್ರಾ ಕಿಡ್ನಾಪರ್ಸ್‌? - 17 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿರುವ ಅಪಹರಣಕಾರರು

ಉದ್ಯಮಿ ಬಿಜೋಯ್ ಅವರ ಪುತ್ರ 8 ವರ್ಷದ ಅನುಭವ್ ಅಪಹರಣ ಪ್ರಕರಣ ಸಂಬಂಧ ಬಾಲಕ ಅಜ್ಜ ಎಕೆ ಶಿವನ್‌ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅಪಹರಣಕಾರರು 17 ಕೋಟಿ ರೂಪಾಯಿಗೆ ಬೇಡಿಕೆ ಇಟ್ಟಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

8 Year Old Boy Kidnap case in Ujire; Kidnappers Demanding for 17 Crore
ಉಜಿರೆ ಬಾಲಕನ ಅಪಹರಣ ಕೇಸ್; 17 ಕೋಟಿಗೆ ಬೇಡಿಕೆ ಇಟ್ರಾ ಕಿಡ್ನಾಪರ್ಸ್‌?

By

Published : Dec 18, 2020, 4:48 AM IST

ಬೆಳ್ತಂಗಡಿ(ದಕ್ಷಿಣ ಕನ್ನಡ): ಉಜಿರೆಯ ಬಿಜೋಯ್ ಏಜೆನ್ಸಿಸ್ ಮಾಲೀಕ, ಉದ್ಯಮಿ ಬಿಜೋಯ್ ಅವರ ಪುತ್ರ 8 ವರ್ಷದ ಅನುಭವ್ ನನ್ನ ನಿನ್ನೆ ಸಂಜೆ ಬಿಳಿ ಇಂಡಿಕಾ ಕಾರಿನಲ್ಲಿ ಮನೆಯ ಗೇಟ್ ಬಳಿಯಿಂದ ಅಪಹರಿಸಲಾಗಿದೆ.

ಇದೀಗ ಅಪಹರಣಕಾರರು 17 ಕೋಟಿ‌ ರೂ. ನೀಡುವಂತೆ ಬೇಡಿಕೆಯನ್ನು ಇರಿಸಿದ್ದಾರೆ ಎಂದು ಬಾಲಕನ ಅಜ್ಜ ಎಕೆ ಶಿವನ್ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಎಕೆ ಶಿವನ್ ಅವರು ವಾಕಿಂಗ್ ಹೋಗಿದ್ದಾಗ ಮೊಮ್ಮಗ ಆಟವಾಡಿ ಅಜ್ಜನ ಎದುರಿನಿಂದ ಮನೆ ಕಡೆಗೆ ಹೋಗುತ್ತಿದ್ದ. ಮನೆಯ ಗೇಟು ಬಳಿ ತಲುಪುತ್ತಿದ್ದಂತೆ ಅಲ್ಲಿಯೆ ನಿಂತಿದ್ದ ಬಿಳಿ ಬಣ್ಣದ ಇಂಡಿಕಾ ಕಾರಿನಿಂದ ಇಬ್ಬರು ಅಪರಿಚಿತರು ಇಳಿದು ಬಾಲಕನನ್ನು ಬಲವಂತದಿಂದ ಕಾರಿಗೆ ಹತ್ತಿಸಿಕೊಂಡಿದ್ದಾರೆ.

ಶಿವನ್ ಓಡಿ ಬಂದು‌ಕಾರಿನ ಬಾಗಿಲು ತೆಗೆಯಲು ಪ್ರಯತ್ನಿಸುವ ವೇಳೆಗೆ ಕಾರನ್ನು ಚಲಾಯಿಸಿಕೊಂಡು ರಥ ಬೀದಿ ಕಡೆಗೆ ತೆರಳಿದ್ದಾರೆ. ಬಳಿಕ ಶಿವನ್ ಅವರ ಸೊಸೆಗೆ ಅಪಹರಣಕಾರರು ಪೋನ್ ಮಾಡಿ ಮಗನನ್ನು ಬಿಡಿಸಲು 100 ಬಿಟ್ ಕಾಯಿನ್ ಅಂದರೆ 17 ಕೋಟಿ ರೂ. ಬೇಡಿಕೆ ಇಟ್ಟಿರುವುದಾಗಿ ಶಿವನ್ ಅವರು ದೂರಿನಲ್ಲಿ ತಿಳಿಸಿದ್ದಾರೆ. ಬೆಳ್ತಂಗಡಿ ಠಾಣೆಗೆ ಬಾಲಕನ ಅಜ್ಜ ಎ ಕೆ ಶಿವನ್ ದೂರು ನೀಡಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ABOUT THE AUTHOR

...view details