ಮಂಗಳೂರು:ಹಲವು ಪ್ರಕರಣಗಳ ತನಿಖೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನ ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಹಲವು ಪ್ರಕರಣಗಳ ತನಿಖೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ - ಮಂಗಳೂರು ಸುದ್ದಿ
ಹಲವು ಪ್ರಕರಣಗಳ ತನಿಖೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನ ವಿಟ್ಲ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಹಲವು ಪ್ರಕರಣಗಳ ತನಿಖೆಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
ಕೊಡುಂಗಾಯಿ ನಿವಾಸಿ ಮಹಮ್ಮದ್ ಹನೀಫ್ ಯಾನೆ ಬಂಧಿತ ಆರೋಪಿ. ಹಲವು ಪ್ರಕರಣಗಳ ತನಿಖೆಗೆ ಹಾಜರಾಗದೆ ತಲೆ ಮರೆಸಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ, ವಿಟ್ಲ ಠಾಣೆಯಲ್ಲಿ ಎರಡು ವರ್ಷದ ಹಿಂದೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಬಳಿಕವೂ ತಲೆ ಮರೆಸಿಕೊಂಡಿದ್ದ ಆರೋಪಿಯನ್ನ ಪೊಲೀಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಬಂಧಿಸಿದ್ದಾರೆ.
ಗದಗ, ಶಿವಮೊಗ್ಗ, ಚಿಕ್ಕಮಂಗಳೂರು, ಮೂಡಿಗೆರೆ, ಬೆಂಗಳೂರು ಸುಬ್ರಹ್ಮಣ್ಯಪುರಂ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕಳ್ಳತನ, ರೋಬರಿ, ಹನಿಟ್ರಾಪ್, ವಂಚನೆ ಸೇರಿ ಹಲವು ಪ್ರಕರಣಗಳು ಈತನ ಮೇಲೆ ದಾಖಲಾಗಿತ್ತು.