ಕರ್ನಾಟಕ

karnataka

ETV Bharat / city

ಸುಬ್ರಹ್ಮಣ್ಯದಲ್ಲಿ ಉಪಹಾರ ಸೇವಿಸುತ್ತಿದ್ದ ಭಕ್ತರೊಬ್ಬರ ಬೆಲೆಬಾಳುವ ಬ್ಯಾಗ್ ಕಳವು: ಸಿಸಿಟಿವಿಯಲ್ಲಿ ಕೃತ್ಯ ಸೆರೆ - ಸುಬ್ರಹ್ಮಣ್ಯದಲ್ಲಿ ಉಪಹಾರ ಸೇವಿಸುತ್ತಿದ್ದ ಭಕ್ತರೊಬ್ಬರ ಬೆಲೆಬಾಳುವ ಬ್ಯಾಗ್ ಕಳವು

ಸುಬ್ರಹ್ಮಣ್ಯದ ಖಾಸಗಿ ಹೊಟೇಲ್​ವೊಂದರಲ್ಲಿ ಉಪಹಾರ ಸೇವಿಸುತ್ತಿದ್ದಾಗ ಭಕ್ತರೊಬ್ಬರ ಸುಮಾರು 17 ಲಕ್ಷ ರೂ. ಮೌಲ್ಯದ ಸ್ವತ್ತುಗಳಿದ್ದ ಬ್ಯಾಗ್ ಅನ್ನು ಕಳ್ಳತನ ಮಾಡಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

A devotee bag stolen in kukke subramanya
ಬ್ಯಾಗ್​ ಕದ್ದು ಪರಾರಿಯಾದ ಕಳ್ಳ

By

Published : Jul 23, 2021, 10:05 AM IST

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದ ಖಾಸಗಿ ಹೋಟೆಲ್​ವೊಂದರಲ್ಲಿ ಉಪಹಾರ ಸೇವಿಸುತ್ತಿದ್ದ ಭಕ್ತರೊಬ್ಬರ ಸುಮಾರು 17 ಲಕ್ಷ ರೂ. ಮೌಲ್ಯದ ಸ್ವತ್ತುಗಳಿದ್ದ ಬ್ಯಾಗ್ ಕಳ್ಳತನ ಮಾಡಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಗ್ರಾಮದ ಬೈರಲಿಂಗೇನ ಹಳ್ಳಿಯ ಗಂಗಮ್ಮ ಮತ್ತು ಮನೆಯವರು ಜು.20ಕ್ಕೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದು ಖಾಸಗಿ ವಸತಿಗೃಹದಲ್ಲಿ ಉಳಿದಿದ್ದರು. ಮರು ದಿನ ಬೆಳಗ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು ರಥ ಬೀದಿಯ ಖಾಸಗಿ ಹೋಟೆಲ್​​​​ವೊಂದರಲ್ಲಿ ಉಪಹಾರ ಸೇವಿಸಿದ್ದಾರೆ.

ಈ ವೇಳೆ, ಮಹಿಳೆ ತನ್ನ ಬ್ಯಾಗ್ ಅನ್ನು ತನ್ನ ಪಕ್ಕದಲ್ಲಿಯೇ ಇರಿಸಿಕೊಂಡಿದ್ದಾರೆ. ಈ ವೇಳೆ, ಮಹಿಳೆಯ ಬ್ಯಾಗ್​ ಅನ್ನು ಖದೀಮನೊಬ್ಬ ಎಗರಿಸಿದ್ದು, ಕಳ್ಳತನದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬ್ಯಾಗ್​ ಕದ್ದು ಪರಾರಿಯಾದ ಕಳ್ಳ

ಈ ಕುರಿತು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ABOUT THE AUTHOR

...view details