ದಕ್ಷಿಣಕನ್ನಡ: ಪರೀಕ್ಷೆಯ ಭಯದಿಂದ ಪುತ್ತೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕೇರಿಯಲ್ಲಿ ನಡೆದಿದೆ.
ಪುತ್ತೂರು: ಪರೀಕ್ಷೆ ಭಯಕ್ಕೆ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ - ಪುತ್ತೂರು ಸರ್ಕಾರಿ ಪದವಿ ಪೂರ್ವ ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ
ಪರೀಕ್ಷೆಯ ಭಯದಿಂದ ಪುತ್ತೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಕೇರಿಯಲ್ಲಿ ನಡೆದಿದೆ.
ವಿದ್ಯಾರ್ಥಿನಿ
ವೀಣಾ (18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎನ್ನಲಾಗಿದೆ. ಪುತ್ತೂರು ಸರ್ಕಾರಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಇಂದು ಕಾಲೇಜಿನಲ್ಲಿ ಪರೀಕ್ಷೆ ನಡೆತ್ತಿದೆ. ಪರೀಕ್ಷೆಯ ಭಯದಿಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದ್ದು, ಈ ಸಂಬಂಧ ಪುತ್ತೂರು ಸಂಪ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.