ಮಂಗಳೂರು: ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳದಲ್ಲಿ ಎಬಿವಿಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆ ಖಂಡಿಸಿ ಮಂಗಳೂರಿನಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಎಬಿವಿಪಿ ಕಾರ್ಯಕರ್ತನ ಮೇಲೆ ಹಲ್ಲೆ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ - mangalore news
ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉಪ್ಪಳದಲ್ಲಿ ಎಬಿವಿಪಿ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಘಟನೆ ಖಂಡಿಸಿ ಮಂಗಳೂರಿನಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿದರು.

ಎಬಿವಿಪಿ ಪ್ರತಿಭಟನೆ
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು, ಹಲ್ಲೆ ಘಟನೆಯನ್ನು ಖಂಡಿಸಿದರು. ಮಂಗಳೂರಿನ ಕಾರ್ ಸ್ಟ್ರೀಟ್ ಕಾಲೇಜಿನಲ್ಲಿ ವಿದ್ಯಾರ್ಥಿಯಾಗಿರುವ ಪ್ರಣಾಮ್ನನ್ನು ಕಾಸರಗೋಡಿನ ಉಪ್ಪಳದಲ್ಲಿ ದುಷ್ಕರ್ಮಿಗಳು ಹಲ್ಲೆಗೈದಿದ್ದರು. ಸೈನಿಕನಾಗುವ ಇಚ್ಛೆ ಹೊಂದಿದ್ದ ಪ್ರಣಾಮ್ ಉಪ್ಪಳದಲ್ಲಿ ದೈಹಿಕ ಕಸರತ್ತು ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಈ ಹಲ್ಲೆ ನಡೆದಿದೆ.
ಕಾಸರಗೋಡಿನಲ್ಲಿ ಮಂಗಳೂರಿನ ಎಬಿವಿಪಿ ಕಾರ್ಯಕರ್ತನ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ
ಇದನ್ನು ಖಂಡಿಸಿ ಮಂಗಳೂರಿನಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಸುವಂತೆ ಒತ್ತಾಯಿಸಿದರು.
Last Updated : Oct 12, 2019, 5:43 PM IST