ಕರ್ನಾಟಕ

karnataka

ETV Bharat / city

ಬಸ್​ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ಶೀಘ್ರದಲ್ಲೇ ಅರೆಸ್ಟ್ : ಕಮೀಷನರ್ ಶಶಿಕುಮಾರ್ - accused will be arrested of harass a woman in bus

ಖಾಸಗಿ ಬಸ್​ವೊಂದರಲ್ಲಿ ಯುವತಿಯೊರ್ವಳಿಗೆ ಕಿರುಕುಳ ನೀಡಿದ ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದಿರುವ ಕಮೀಷನರ್​​ ಆರೋಪಿ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

Mangalore police
ಮಂಗಳೂರು

By

Published : Jan 16, 2021, 8:43 PM IST

ಮಂಗಳೂರು:ಮಂಗಳೂರಿನ ಖಾಸಗಿ ಬಸ್​ವೊಂದರಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಪ್ರಕರಣದ ಆರೋಪಿಯನ್ನು ಶೀಘ್ರ ಬಂಧಿಸಲಾಗುವುದು ಎಂದು ಮಂಗಳೂರು ಪೊಲೀಸ್ ಕಮೀಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್ ಕಮೀಷನರ್ ಶಶಿಕುಮಾರ್

ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಖಾಸಗಿ ಬಸ್​ನಲ್ಲಿ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬಳು ಬರೆದುಕೊಂಡಿದ್ದಳು. ಈ ಬಗ್ಗೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲು ಇಲಾಖೆ ಮುಂದಾಗಿತ್ತು. ಆದರೆ ಮಹಿಳೆಯೇ ದೂರು ನೀಡುತ್ತೇನೆ ಎಂದು ತಿಳಿಸಿದ್ದು, ಅದರಂತೆ ದೂರು ದಾಖಲಿಸಿಕೊಳ್ಳಲಾಗಿದೆ ಎಂದರು.

ಇದನ್ನೂ ಓದಿ:ಬಸ್​ನಲ್ಲಿ ಅನುಭವಿಸಿದ ಲೈಂಗಿಕ ಕಿರುಕುಳದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದ ಯುವತಿ!

ಆರೋಪಿಯ ಪತ್ತೆಗಾಗಿ ತಂಡ ರಚಿಸಲಾಗಿದ್ದು, ಶೀಘ್ರ ಆರೋಪಿಯನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ABOUT THE AUTHOR

...view details