ಮಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು.
ಡ್ರಗ್ಸ್ ಮಾಫಿಯಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ - ರಾಜ್ಯದ ಹಲವು ಶಾಲಾ-ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಡ್ರಗ್ಸ್ ಜಾಲ
ರಾಜ್ಯದ ಹಲವು ಶಾಲಾ-ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಡ್ರಗ್ಸ್ ಜಾಲ ನಡೆಯುತ್ತಿದೆ. ಕೋಡ್ ವರ್ಡ್ ಮೂಲಕ ಈ ದಂಧೆ ನಡೆಯುತ್ತಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಎಬಿವಿಪಿ ಆಗ್ರಹಿಸಿದೆ.
ಡ್ರಗ್ಸ್ ಮಾಫಿಯಾ ವಿರುದ್ದ ಕ್ರಮ ಕೈಗೊಳ್ಳಬೇಕು, ಮಂಗಳೂರಿನಲ್ಲಿ ಎಬಿವಿಪಿ ಪ್ರತಿಭಟನೆ
ಮಂಗಳೂರಿನ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು ಡ್ರಗ್ಸ್ ಮಾಫಿಯಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಜಾಲ ವ್ಯಾಪಿಸಿದ್ದು, ರಾಜ್ಯದ ಹಲವು ಶಾಲಾ-ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಡ್ರಗ್ಸ್ ಜಾಲ ನಡೆಯುತ್ತಿದೆ. ಕೋಡ್ ವರ್ಡ್ ಮೂಲಕ ಈ ದಂಧೆ ನಡೆಯುತ್ತಿದೆ. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿ ಶೀಘ್ರ ಕ್ರಮ ಕೈಗೊಳ್ಳಬೇಕು. ಪ್ರಭಾವಿ ವ್ಯಕ್ತಿಗಳ ಹಸ್ತಕ್ಷೇಪಕ್ಕೆ ಮಣಿಯದೆ ಡ್ರಗ್ಸ್ ಜಾಲ ಭೇದಿಸಲು ಪೊಲೀಸರಿಗೆ ಮುಕ್ತ ಅಧಿಕಾರ ನೀಡಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.
Last Updated : Sep 3, 2020, 2:26 PM IST