ಕರ್ನಾಟಕ

karnataka

ETV Bharat / city

ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಗಳ ಆಸ್ತಿ ಮುಟ್ಟುಗೋಲು: ಎಡಿಜಿಪಿ ಅಲೋಕ್ ಕುಮಾರ್

ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರಿಯೆಗಳು ನಡೆಯುತ್ತಿದೆ. ಮುಖ್ಯ ಆರೋಪಿಗಳ ನಾಪತ್ತೆಗಾಗಿ ಸಹಕಾರ ಮಾಡಿದವರ ವಿರುದ್ಧವೂ ಕ್ರಮ ಆಗಲಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.

adgp-alok-kumar
ಎಡಿಜಿಪಿ ಅಲೋಕ್ ಕುಮಾರ್

By

Published : Aug 10, 2022, 10:45 PM IST

ಸುಳ್ಯ(ದಕ್ಷಿಣ ಕನ್ನಡ):ಪ್ರವೀಣ್ ನೆಟ್ಟಾರ್ ಹತ್ಯೆಯ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕುವ ಪ್ರಕ್ರಿಯೆಗಳು ನಡೆಯುತ್ತಿದೆ. ಮುಖ್ಯ ಆರೋಪಿಗಳ ನಾಪತ್ತೆಗಾಗಿ ಸಹಕಾರ ಮಾಡಿದವರ ವಿರುದ್ಧವೂ ಕ್ರಮ ಆಗಲಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದರು.

ಪ್ರವೀಣ್ ನೆಟ್ಟಾರ್ ಹತ್ಯೆ ಆರೋಪಿಗಳ ಆಸ್ತಿ ಮುಟ್ಟುಗೋಲು

ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಆರು ಜಿಲ್ಲೆಗಳ ಎಸ್ಪಿಗಳು, ಡಿವೈಎಸ್ಪಿಗಳು ಹಾಗೂ ಎನ್ಐಎ ಅಧಿಕಾರಿಗಳೊಂದಿಗೆ ಸಭೆ ನಡೆಯಿತು. ಸಭೆಯ ನಂತರ ಮಾತನಾಡಿದ ಅಲೋಕ್ ಕುಮಾರ್, ಪ್ರವೀಣ್ ಹತ್ಯೆ ಕೇಸ್​ನಲ್ಲಿ ಪ್ರಮುಖ ಆರೋಪಿಗಳ ಸಂಪೂರ್ಣ ಮಾಹಿತಿ ಲಭ್ಯವಾಗಿದೆ. ಅವರ ಫೋಟೋ, ಮನೆ ವಿಳಾಸ, ತಂದೆ-ತಾಯಿ, ಹೆಂಡತಿ ಮಾಹಿತಿಗಳು ಎಲ್ಲವೂ ಇದೆ. ಕೋರ್ಟ್ ಮೂಲಕ ಆರೋಪಿಗಳಿಗೆ ವಾರೆಂಟ್ ನೀಡುವ ಪ್ರಕ್ರಿಯೂ ಜಾರಿಯಲ್ಲಿದೆ ಎಂದರು.

ಪ್ರಮುಖ ಆರೋಪಿಗಳನ್ನು ಬಚ್ಚಿಡುವ ಕೆಲಸ ನಡೆಯುತ್ತಿದೆ. ಅವರ ಸ್ಥಳ ಬದಲಾವಣೆ ಮಾಡಲಾಗುತ್ತಿದೆ. ಮಾಹಿತಿ ಪಡೆದು ಪೊಲೀಸರ ದಾಳಿ ನಡೆಸುವಾಗ ಪ್ರಮುಖ ಆರೋಪಿಗಳು ಪರಾರಿಯಾಗುತ್ತಿದ್ದಾರೆ ಎಂದರು. ಸಭೆಯಲ್ಲಿ ಎನ್ಐಎ ಅಧಿಕಾರಿಗಳೊಂದಿಗೆ ಮಂಡ್ಯ, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಎಸ್​ಪಿಗಳೂ ಉಪಸ್ಥಿತರಿದ್ದರು.

ಇದನ್ನೂ ಓದಿ :ಪ್ರವೀಣ್‌ ನೆಟ್ಟಾರು ಹತ್ಯೆಯಲ್ಲಿ ಪಿಎಫ್ಐ ಲಿಂಕ್ ಬಗ್ಗೆ ದಾಖಲೆಗಳಿಲ್ಲದೆ ಹೇಳಲಾಗದು: ಅಲೋಕ್‌ ಕುಮಾರ್‌

ABOUT THE AUTHOR

...view details