ಪುತ್ತೂರು (ದಕ್ಷಿಣ ಕನ್ನಡ):ಶ್ವಾಸಕೋಶದ ಸಮಸ್ಯೆಯಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿರುವ ಸಕಲೇಶಪುರದ ಅರೇಹಳ್ಳಿ ಮೂಲದ ಸುಹನಾ (22) ಎಂಬ ಯುವತಿಯನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ವಿಶೇಷ ಆ್ಯಂಬುಲೆನ್ಸ್ ಮೂಲಕ ಜೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಬೆಂಗಳೂರಿನ ವೈಟ್ ಫೀಲ್ಡ್‌ನಲ್ಲಿರುವ ವೈದೇಹಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಯುವತಿಗೆ ಶ್ವಾಸಕೋಶದ ಸಮಸ್ಯೆ: ಪುತ್ತೂರಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್‌ನಲ್ಲಿ ರವಾನೆ - puttur latest news
ಶ್ವಾಸಕೋಶದ ಸಮಸ್ಯೆಯಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿರುವ ಸಕಲೇಶಪುರದ ಅರೇಹಳ್ಳಿ ಮೂಲದ ಯುವತಿಯನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ವಿಶೇಷ ಆ್ಯಂಬುಲೆನ್ಸ್ ಮೂಲಕ ಜೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಪುತ್ತೂರು ಸಂಚಾರಿ ಪೊಲೀಸರು ನಗರ ವ್ಯಾಪ್ತಿಯಲ್ಲಿ ಆ್ಯಂಬುಲೆನ್ಸ್ನ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು. ಆ್ಯಂಬುಲೆನ್ಸ್ ಸಾಗಿ ಬರುವ ರಸ್ತೆಯಲ್ಲಿ ಆಯಾ ಊರಿನ ನಾಗರೀಕರು ಹಾಗೂ ಸಂಘಟನೆಗಳ ಕಾರ್ಯಕರ್ತರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಆ್ಯಂಬುಲೆನ್ಸ್ ಸಂಚರಿಸುವ ಮಾರ್ಗ: ಆ್ಯಂಬುಲೆನ್ಸ್ ಪುತ್ತೂರಿನ ಮಹಾವೀರ ಆಸ್ಪತ್ರೆಯಿಂದ ಉಪ್ಪಿನಂಗಡಿ, ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆ, ಚಾರ್ಮಾಡಿ, ಬಂಕಲ್ ಹ್ಯಾಂಡ್ ಪೋಸ್ಟ್, ಗೋಣಿಬೀಡು ,ಬೇಲೂರು, ಹಾಸನ, ಯಶವಂತುರ, ಹೆಬ್ಬಾಳ, ರಾಮಮೂರ್ತಿನಗರ, ಟಿನ್ ಫ್ಯಾಕ್ಟರಿ, ಮಹದೇವಪುರ ಮಾರ್ಗವಾಗಿ ವೈದೇಹಿ ಆಸ್ಪತ್ರೆಗೆ ತೆರಳಲಿದೆ.