ಕರ್ನಾಟಕ

karnataka

ETV Bharat / city

ಮೇ 25ರಂದು ಕುಕ್ಕೆಯಲ್ಲಿ ಸರಳ ಸಾಮೂಹಿಕ ವಿವಾಹ : ಆಸಕ್ತರಿಂದ ಅರ್ಜಿ ಆಹ್ವಾನ.. - ಸಾಮೂಹಿಕ ವಿವಾಹದಿಂದ ದೊರಕುವ ಸೌಲಭ್ಯಗಳು

ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕುಕ್ಕೆ ದೇವಳದಲ್ಲಿ ಜನಸಾಮಾನ್ಯರ ಅನುಕೂಲಕ್ಕಾಗಿ ಸಪ್ತಪದಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ..

applications-for-mass-wedding-in-dakshina-kannada
ಮೇ 25ರಂದು ಕುಕ್ಕೆಯಲ್ಲಿ ಸರಳ ಸಾಮೂಹಿಕ ವಿವಾಹ : ಆಸಕ್ತರಿಂದ ಅರ್ಜಿ ಆಹ್ವಾನ..

By

Published : Apr 23, 2022, 7:18 AM IST

ದಕ್ಷಿಣ ಕನ್ನಡ :ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಪ್ರಸಿದ್ಧ ನಾಗಾರಾಧನೆಯ ಪುಣ್ಯತಾಣ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮೇ 25ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಕುಕ್ಕೆ ದೇವಳದಲ್ಲಿ ಜನಸಾಮಾನ್ಯರ ಅನುಕೂಲಕ್ಕಾಗಿ ಸಪ್ತಪದಿ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಾಮೂಹಿಕ ವಿವಾಹವಾಗಲು ಬಯಸುವವರು ಶ್ರೀ ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ತಮ್ಮ ಅರ್ಜಿಯನ್ನು ಶ್ರೀ ದೇವಳಕ್ಕೆ ಸಲ್ಲಿಸಬಹುದು. ಇದರೊಂದಿಗೆ 08257-281226,236200, 281700, 281423 ನಂಬರ್​ಗೆ ಕರೆ ಮಾಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು ಅಥವಾ ಶ್ರೀ ದೇವಳದ ಕಚೇರಿ ವೇಳೆಯಲ್ಲಿ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆಯಬಹುದು.

ಮೇ 25ರಂದು ಬೆಳಗ್ಗೆ 10.50ರಿಂದ 11.40ರವರೆಗೆ ನೆರವೇರುವ ಕಟಕ ಲಗ್ನ ಸುಮೂಹುರ್ತದಲ್ಲಿ ವಿವಾಹ ನೆರವೇರಲಿದೆ. ಮೇ 4ರಂದು ವಧು-ವರರು ನಿಗದಿತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಮೇ 8ರಂದು ನೋಂದಾಯಿತ ವಧು-ವರರ ವಿವರಗಳನ್ನು ದೇವಳದಲ್ಲಿ ಪ್ರಕಟಿಸಲಾಗುವುದು. ಮೇ 13ರಂದು ಆಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕವಾದರೆ, ಮೇ 15ರಂದು ವಧುವರರ ಅಂತಿಮ ಪಟ್ಟಿ ಪ್ರಕಟಿಸಲಾಗುವುದು.

ಬೇಕಾದ ಅಗತ್ಯ ದಾಖಲೆಗಳು :ವಧು-ವರರು ತಮ್ಮ ಪೂರ್ಣ ವಿಳಾಸದೊಂದಿಗೆ ಜನನ ದಿನಾಂಕವನ್ನು ದೃಢೀಕರಿಸುವ ಶಾಲಾ ದೃಢಪತ್ರ ಪ್ರತಿ, ಪಾಸ್‌ಪೋರ್ಟ್ ಸೈಜ್‌ನ 2 ಫೋಟೋ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ವಧು-ವರರ ಬ್ಯಾಂಕ್ ಖಾತೆ ಸಂಖ್ಯೆಯ ದಾಖಲೆ ಪ್ರತಿ, ಅವಿವಾಹಿತರು ಎಂಬುದಾಗಿ ಪಂಚಾಯತ್‌ನಿಂದ ಅಥವಾ ಸಂಬಂಧಪಟ್ಟ ಸರ್ಕಾರಿ ಇಲಾಖಾಧಿಕಾರಿಗಳಿಂದ ದೃಢಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ದೊರೆಯುವ ಸೌಲಭ್ಯಗಳು :ಸರಳ ಸಾಮೂಹಿಕ ವಿವಾಹವಾಗುವ ವಧುವಿಗೆ ಕಂದಾಯ ಇಲಾಖೆಯ ವತಿಯಿಂದ ಆದರ್ಶ ವಿವಾಹ ಯೋಜನೆಯಡಿ ರೂ.10 ಸಾವಿರ ನಿಶ್ಚಿತ ಠೇವಣಿ ಸೌಲಭ್ಯವನ್ನು ಒದಗಿಸಲಾಗುವುದು. ವಿವಾಹವಾಗುವ ಪರಿಶಿಷ್ಠ ಜಾತಿಯ ಜೋಡಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸರಳ ವಿವಾಹ ಯೋಜನೆಯಡಿ ರೂ.50 ಸಾವಿರಗಳನ್ನು ಒದಗಿಸಲಾಗುವುದು.

ಸರಳ ವಿವಾಹವಾಗುವ ವರನಿಗೆ ಶ್ರೀ ದೇವಳದಿಂದ ಪ್ರೋತ್ಸಾಹ ಧನವಾಗಿ ರೂ.5 ಸಾವಿರ ಹಾಗೂ ವಧುವಿಗೆ ರೂ.10 ಸಾವಿರ ನೀಡಲಾಗುವುದು. ಸುಮಾರು ರೂ.40 ಸಾವಿರ ಮೌಲ್ಯದಲ್ಲಿ ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡನ್ನು ದೇವಾಲಯದಿಂದ ಭರಿಸಲಾಗುವುದು. ಸಾಮೂಹಿಕ ಸರಳ ವಿವಾಹಕ್ಕೆ ಆಗಮಿಸುವ ವಧು-ವರರು ಮತ್ತು ಅವರ ಬಂಧುಗಳಿಗೆ ಹಾಗೂ ಸಾರ್ವಜನಿಕರಿಗೆ ಊಟೋಪಚಾರ ಹಾಗೂ ಆವಶ್ಯಕ ವ್ಯವಸ್ಥೆಗಳನ್ನು ದೇವಳದಿಂದಲೇ ಮಾಡಲಾಗುವುದು.

ಇದನ್ನೂ ಓದಿ:ಅಂತಿಮ ಹಂತಕ್ಕೆ ಬಿಜೆಪಿ ವಿಭಾಗೀಯ ಸಭೆ: ಇಂದು ಬೆಂಗಳೂರು ನಗರ ವಿಭಾಗದ ಸಂಘಟನಾತ್ಮಕ ಸಭೆ

ABOUT THE AUTHOR

...view details