ಮಂಗಳೂರು:ಬಾಬ್ರಿ ಮಸೀದಿ ತೀರ್ಪು ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಐವರು ಎಸ್ಡಿಪಿಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ತೀರ್ಪಿಗೆ ವಿರೋಧ: ಪ್ರತಿಭಟನೆ ನಡೆಸುತ್ತಿದ್ದ ಐವರು SDPI ಮುಖಂಡರು ಪೊಲೀಸ್ ವಶಕ್ಕೆ - SDPI leaders protest against babri masjid verdict
ಇಂದು ಪ್ರಕಟಗೊಂಡ ಬಾಬ್ರಿ ಮಸೀದಿ ಐತಿಹಾಸಿಕ ತೀರ್ಪು ವಿರೋಧಿಸಿ, ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದರು. ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಐವರು ಎಸ್ಡಿಪಿಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಪ್ರಕಟಗೊಂಡ ಬಾಬ್ರಿ ಮಸೀದಿ ಐತಿಹಾಸಿಕ ತೀರ್ಪು ವಿರೋಧಿಸಿ, ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟಿಸಲು ಎಸ್ಡಿಪಿಐ ಆಯೋಜಿಸಿತ್ತು. ಪ್ರತಿಭಟನೆ ನಡೆಸುತ್ತಿದ್ದ ವೇಳೆ, ಅಲ್ಲಿಗೆ ಬಂದ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಎಸ್ಡಿಪಿಐ ರಾಜ್ಯ ಮುಖಂಡ ಅಶ್ರಫ್ ಮಾಚಾರ್ ಸೇರಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಖಂಡರನ್ನು ವಶಕ್ಕೆ ಪಡೆದ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಬಂದಿದ್ದ ಇತರ ಕಾರ್ಯಕರ್ತರು ಅಲ್ಲಿಂದ ತೆರಳಿದರು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಇತ್ತೀಚೆಗೆ ಅವಕಾಶ ನಿರಾಕರಿಸಲಾಗಿದ್ದು, ಇಂದು ನಡೆಯುವ ಪ್ರತಿಭಟನೆಗೆ ಎಸ್ಡಿಪಿಐ ಕಾರ್ಯಕರ್ತರು ಪೊಲೀಸರ ಅನುಮತಿಯನ್ನು ಪಡೆದುಕೊಂಡಿರಲಿಲ್ಲ. ಏಕಾಏಕಿ ಪ್ರತಿಭಟನೆ ನಡೆಸಲು ಬಂದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಯುತ್ತಿದ್ದಂತೆಯೆ ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.