ಮಂಗಳೂರು: ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ವೈದ್ಯರ ಮೇಲೆ ಹಲ್ಲೆ ಪ್ರಕರಣ: ಇಬ್ಬರ ಬಂಧನ - Athena Hospital doctor
ಮಂಗಳೂರಿನ ಫಳ್ನೀರ್ನಲ್ಲಿರುವ ಅಥೆನಾ ಆಸ್ಪತ್ರೆಯ ವೈದ್ಯ ಡಾ. ಜಯಪ್ರಕಾಶ್ ಮೇಲೆ ಕೊರೊನಾ ರೋಗಿಯ ಚಿಕಿತ್ಸೆಗೆ ಸಂಬಂಧಿಸಿದಂತೆ ಕುಟುಂಬಸ್ಥರು ಹಲ್ಲೆ ನಡೆಸಿದ್ದರು. ಈ ಕುರಿತು ವೈದ್ಯರ ಮೇಲೆ ಹಲ್ಲೆ ಹಾಗೂ ಕೊರೊನಾ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿತ್ತು. ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ವೈದ್ಯರ ಮೇಲೆ ಹಲ್ಲೆ ಪ್ರಕರಣ
ನಗರದ ಮಾರ್ನಮಿಕಟ್ಟೆಯ ಶಂಶೀರ್ ಆಲಿ (43), ಚೊಕ್ಕಬೆಟ್ಟುವಿನ ಸರ್ಫರಾಜ್ (43) ಬಂಧಿತರು. ಮಂಗಳೂರಿನ ಫಳ್ನೀರ್ನಲ್ಲಿರುವ ಅಥೆನಾ ಆಸ್ಪತ್ರೆಯ ವೈದ್ಯ ಡಾ. ಜಯಪ್ರಕಾಶ್ ಮೇಲೆ ಕೊರೊನಾ ರೋಗಿಯ ಚಿಕಿತ್ಸೆಗೆ ಸಂಬಂಧಿಸಿದಂತೆ ಕುಟುಂಬಸ್ಥರು ಹಲ್ಲೆ ನಡೆಸಿದ್ದರು.
ಈ ಕುರಿತು ವೈದ್ಯರ ಮೇಲೆ ಹಲ್ಲೆ ಹಾಗೂ ಕೊರೊನಾ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿತ್ತು. ಘಟನೆಯ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳಿಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.