ಮಂಗಳೂರು: ನಗರದ ಹಿರಿಯ ವಕೀಲ ಎಸ್ ಎಸ್ ಖಾಝಿ ಮೇಲೆ ಹಲ್ಲೆ ಮಾಡಿದವರನ್ನು ಶೀಘ್ರ ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಮಂಗಳೂರು ವಕೀಲರ ಸಂಘ ಒತ್ತಾಯಿಸಿದೆ.
ಹಿರಿಯ ವಕೀಲ ಖಾಝಿ ಮೇಲೆ ಹಲ್ಲೆ ಪ್ರಕರಣ.. ಆರೋಪಿಗಳ ಶೀಘ್ರ ಪತ್ತೆಗೆ ವಕೀಲರ ಸಂಘ ಆಗ್ರಹ
ಹಿರಿಯ ವಕೀಲ ಎಸ್ ಎಸ್ ಖಾಝಿ ಮೇಲೆ ಹಲ್ಲೆ ಮಾಡಿದವರನ್ನು ಶೀಘ್ರ ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲರ ಸಂಘ, ಮಂಗಳೂರು ನಗರ ಪೊಲೀಸ್ ಆಯುಕ್ತ ಪಿ ಎಸ್ ಹರ್ಷ ಅವರನ್ನು ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಿದೆ.
ಶನಿವಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಪಿ ಎಸ್ ಹರ್ಷ ಅವರನ್ನು ಭೇಟಿ ಮಾಡಿದ ಮಂಗಳೂರು ವಕೀಲರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಈ ಬಗ್ಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.ಎರಡು ದಿನಗಳ ಹಿಂದೆ ತೊಕ್ಕೊಟ್ಟು ಸಮೀಪ ಕಾರಿನಲ್ಲಿ ತೆರಳುತ್ತಿದ್ದ ಎಸ್ ಎಸ್ ಖಾಜಿಯವರ ಮೇಲೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿ ಪರಾರಿಯಾಗಿತ್ತು. ಈ ಹಿನ್ನೆಲೆಯಲ್ಲಿ ವಕೀಲರ ಸಂಘ ಆರೋಪಿಗಳನ್ನು ಶೀಘ್ರವಾಗಿ ಪತ್ತೆಹಚ್ಚಿ, ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಮನವಿ ಮಾಡಿದೆ.
ಸಂಘದ ಅಧ್ಯಕ್ಷ ಎನ್. ನರಸಿಂಹ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಹೆಚ್ ವಿ ರಾಘವೇಂದ್ರ, ಉಪಾಧ್ಯಕ್ಷ ಜಿತೇಂದ್ರ ಕುಮಾರ್ ಮೊದಲಾದವರು ನಿಯೋಗದಲ್ಲಿದ್ದರು.