ಕಡಬ(ದಕ್ಷಿಣ ಕನ್ನಡ): ಜಿಲ್ಲೆಯ ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ಸರ್ಕಾರಿ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಸಿದ್ದ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ದೋಳ್ಪಾಡಿ ಗ್ರಾಮಸ್ಥರು ಪೊಲೀಸರಿಗೆ ಮನವಿ ಸಲ್ಲಿಸಿದರು.
5ನೇ ಕ್ಲಾಸ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಆರೋಪಿ ಬಂಧನಕ್ಕೆ ಜನರ ಒತ್ತಾಯ - kadaba attempted rape of a student news
ಕಡಬ ತಾಲೂಕಿನ ದೋಳ್ಪಾಡಿಯಲ್ಲಿ ಐದನೇ ತರಗತಿಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಆರೋಪಿಯನ್ನು ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ ಗ್ರಾಮಸ್ಥರು ಪೊಲೀಸ್ ಉನ್ನತಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
![5ನೇ ಕ್ಲಾಸ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಆರೋಪಿ ಬಂಧನಕ್ಕೆ ಜನರ ಒತ್ತಾಯ attampte-to-rape-of-a-sudent-in-kadaba-dolpadi](https://etvbharatimages.akamaized.net/etvbharat/prod-images/768-512-5392314-thumbnail-3x2-phto.jpg)
ಡಿ.14 ರಂದು ವಿದ್ಯಾರ್ಥಿನಿ ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ, ಆರೋಪಿ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಅಷ್ಟರಲ್ಲಿ ಬಾಲಕಿ ಕೂಗಿಕೊಂಡಾಗ ಕೊಲೆಗೈಯಲು ಮುಂದಾಗಿದ್ದನಂತೆ. ದಾರಿಯಲ್ಲಿ ಯಾರೋ ಬರುತ್ತಿರುವುದನ್ನು ಗಮನಿಸಿ ವಿದ್ಯಾರ್ಥಿನಿಯನ್ನು ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿನಿ ಮೇಲೆ ಹಾಡಹಗಲೇ ನಡುರಸ್ತೆಯಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ಎಷ್ಟೇ ಪ್ರಭಾವಿತನಾಗಿದ್ದರೂ ಕೂಡಾ ಅವನಿಗೆ ಕಠಿಣ ಶಿಕ್ಷೆ ನೀಡಬೇಕೆಂದು ದೋಳ್ಪಾಡಿ ನಿವಾಸಿಗಳು ಮತ್ತು ಹಲವು ಸಂಘಟನೆಗಳ ಸದಸ್ಯರು ಪುತ್ತೂರು ಡಿವೈಎಸ್ಪಿ ದಿನಕರ್ ಶೆಟ್ಟಿಯವರಿಗೆ ಮನವಿ ಸಲ್ಲಿಸಿದ್ದಾರೆ.