ಬಂಟ್ವಾಳ (ದಕ್ಷಿಣ ಕನ್ನಡ): ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಆಟೋ ಚಾಲಕನೋರ್ವನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಕಂಬಳಬೆಟ್ಟು ನಿವಾಸಿ ಅಬ್ದುಲ್ ನಾಸಿರ್ ಬಂಧಿತ ಆರೋಪಿ.
ಪರಿಚಯವಿದ್ದ ಅಪ್ರಾಪ್ತೆಯನ್ನು ತನ್ನ ಆಟೋದಲ್ಲಿ ಶಾಲೆಗೆ ಕರೆದೊಯ್ಯುತ್ತಿದ್ದ ಆರೋಪಿಯು ಆಕೆಯ ಮನೆಗೆ ಆಗಾಗ್ಗೆ ಬರುತ್ತಿದ್ದ. ಮನೆಗೆ ಬರದಂತೆಯೂ ಆತನಿಗೆ ಎಚ್ಚರಿಕೆ ನೀಡಲಾಗಿತ್ತು ಎನ್ನಲಾಗ್ತಿದೆ.
ಇದನ್ನೂ ಓದಿ: ಅಕ್ಕಳಿಗೆ ಬೆಂಕಿ ಹಚ್ಚಿದ ತಂಗಿ.. ಉರಿಯುತ್ತಿರುವ ಬೆಂಕಿಯ ಜೊತೆನೇ ತಂಗಿಯನ್ನು ತಬ್ಬಿಕೊಂಡ ಅಕ್ಕ!
ಈ ವಿಚಾರದಲ್ಲಿ ಮನೆಯವರು ಬಾಲಕಿಯನ್ನು ಮತ್ತಷ್ಟು ವಿಚಾರಿಸಿದಾಗ ಆತ ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದು ಬೆಳಕಿಗೆ ಬಂದಿದೆ ಎಂದು ಬಾಲಕಿಯ ತಾಯಿ ವಿಟ್ಲ ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ. ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಇಲ್ಲೊಮ್ಮೆ ನೋಡಿ - ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ