ಕರ್ನಾಟಕ

karnataka

ETV Bharat / city

ಮಾಜಿ ಶಾಸಕ ಇದಿನಬ್ಬ ಪುತ್ರನ ಮನೆಗೆ ಮುತ್ತಿಗೆ ಯತ್ನ.. ವಿಹಿಂಪ, ಬಜರಂಗದಳ ಕಾರ್ಯಕರ್ತರ ಬಂಧನ

ವಿಶ್ವ ಹಿಂದು ಪರಿಷತ್‌ ಹಾಗೂ ಬಜರಂಗದಳದ ಕಾರ್ಯಕರ್ತರು ಮಾಜಿ ಶಾಸಕ ಇದಿನಬ್ಬ ಮಗ ಬಿ.ಎಂ. ಬಾಷಾ ಮನೆಗೆ ನುಗ್ಗಲು ಯತ್ನಿಸಿದ್ದು, ಇದನ್ನು ಪೊಲೀಸರು ತಡೆದು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

bajarangadal activists tried to attack on idinabba sons house
ಇದಿನಬ್ಬ ಪುತ್ರನ ಮನೆಗೆ ಮುತ್ತಿಗೆ ಹಾಕಲು ಯತ್ನ

By

Published : Aug 11, 2021, 12:08 PM IST

ಮಂಗಳೂರು: ಮಾಜಿ ಶಾಸಕ ಇದಿನಬ್ಬ ಪುತ್ರನ ಮನೆ (ಉಳ್ಳಾಲದ ಮಾಸ್ತಿಕಟ್ಟೆ ಬಳಿ)ಗೆ ವಿಶ್ವ ಹಿಂದು ಪರಿಷತ್‌ ಹಾಗೂ ಬಜರಂಗದಳದ ಕಾರ್ಯಕರ್ತರು ನುಗ್ಗಲು ಯತ್ನಿಸಿದ್ದು, ಇದನ್ನು ಪೊಲೀಸರು ತಡೆದು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಇದಿನಬ್ಬ ಪುತ್ರನ ಮನೆಗೆ ಮುತ್ತಿಗೆ ಹಾಕಲು ಯತ್ನ

ಈ ಹಿಂದೆ ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದಡಿ ಮಾಜಿ ಶಾಸಕ ಇದಿನಬ್ಬ ಅವರ ಪುತ್ರ ಬಿ.ಎಂ ಬಾಷಾ ಮನೆಗೆ ಎನ್‌ ಐಎ ಅಧಿಕಾರಿಗಳು ದಾಳಿ ನಡೆಸಿ ಆತನ ಪುತ್ರನನ್ನು ಬಂಧಿಸಿದ್ದರು. ಅಲ್ಲದೇ, ಈ ಹಿಂದೆಯೂ ಮನೆಯ ಒಬ್ಬ ಸದಸ್ಯೆ ಉಗ್ರ ಸಂಘಟನೆಗಳ ಜೊತೆಗೆ ನಂಟು ಹೊಂದಿ ಸಿರಿಯಾ ದೇಶಕ್ಕೆ ತೆರಳಿದ್ದರು. ಮನೆಯಲ್ಲಿ ಹಿಂದೂ ಧರ್ಮದಿಂದ ಮತಾಂತರಗೊಂಡ ಮಹಿಳೆಯೊಬ್ಬರು ಉಗ್ರ ಸಂಘಟನೆ ಜೊತೆಗೆ ಸಂಪರ್ಕ ಇರುವ ಕುರಿತು ಎನ್‌ ಐಎ ಮಾಹಿತಿ ಕಲೆಹಾಕಿ ಆಕೆಯ ಪಾಸ್‌ ಪೋರ್ಟ್​ ಅನ್ನು ಸೀಜ್​ ಮಾಡಿದೆ ಎಂದು ಹೇಳಲಾಗ್ತಿದೆ.

ಇದೀಗ ವಿಹಿಂಪ, ಬಜರಂಗದಳ ಕಾರ್ಯಕರ್ತರು ಅದಿನಬ್ಬ ಅವರ ಪುತ್ರನ ಮನೆಗೆ ನುಗ್ಗಲು ಯತ್ನಿಸಿದಾಗ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ:ಅಧಿಕಾರ ಕಳೆದುಕೊಂಡಾಗಿನಿಂದ‌ ಸಿದ್ದರಾಮಯ್ಯಗೆ ಕೆಟ್ಟ ಕನಸು ಬೀಳುತ್ತಿವೆ: ಈಶ್ವರಪ್ಪ ವ್ಯಂಗ್ಯ

ABOUT THE AUTHOR

...view details