ಉಳ್ಳಾಲ(ಮಂಗಳೂರು): ಬೈಕ್ ಹಾಗು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಬಳಿ ನಡೆದಿದೆ.
ಚೆಂಬುಗುಡ್ಡೆ ನಿವಾಸಿಗಳಾದ ಚರಣ್ ಮತ್ತು ಮಂಜುನಾಥ್ ಗಂಭೀರವಾಗಿ ಗಾಯಗೊಂಡವರು. ಕೂಲಿ ಕಾರ್ಮಿಕರಾಗಿದ್ದ ಇಬ್ಬರು ಬೈಕ್ನಲ್ಲಿ ತೊಕ್ಕೊಟ್ಟು ಕಡೆಯಿಂದ ತಲಪಾಡಿ ಕಡೆಗೆ ತೆರಳುತ್ತಿದ್ದ ವೇಳೆ ಕಾರು ಡಿಕ್ಕಿ ಹೊಡೆದಿದೆ. ಕಾರು ಚಾಲಕ ಮಹಮ್ಮದ್ ಅಜ್ಮಲ್ ಎಂಬುವವರ ವಿರುದ್ಧ ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.