ಮಂಗಳೂರು:ಶಿರಾ, ಆರ್.ಆರ್.ನಗರ ಹಾಗೂ ನಾಲ್ಕು ವಿಧಾನ ಪರಿಷತ್ ಚುನಾವಣೆಗಳು ಮುಗಿದಿದ್ದು, ಈ ಚುನಾವಣೆಗಳಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಎರಡು ವಿಧಾನಸಭೆ, ನಾಲ್ಕು ವಿಧಾನ ಪರಿಷತ್ ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ: ಕಟೀಲ್ - ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಈಗಾಗಲೇ ನಡೆದಿರುವ ಎರಡು ವಿಧಾನಸಭೆ ಹಾಗೂ ನಾಲ್ಕೂ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುತ್ತದೆ. ಮುಂದೆ ಎರಡು ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳು ಬರಲಿದೆ. ಆ ಸ್ಥಾನಗಳನ್ನು ಗೆಲ್ಲುವ ಸಂಕಲ್ಪವನ್ನು ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮಾಡುತ್ತೇವೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಎರಡು ವಿಧಾನಸಭೆ, ನಾಲ್ಕು ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ: ಕಟೀಲ್
ಅಲ್ಲದೆ, ಪದಾಧಿಕಾರಿಗಳ ಸಭೆಯನ್ನು 15 ದಿನಕ್ಕೊಂದು ಬಾರಿ, ಕೋರ್ ಕಮಿಟಿ ಸಭೆಯನ್ನು ತಿಂಗಳಿಗೊಂದು ಬಾರಿ, ಪ್ರಧಾನ ಕಾರ್ಯದರ್ಶಿಗಳ ಸಭೆಯನ್ನು 8 ದಿನಕ್ಕೊಂದು ಬಾರಿ ಮಾಡಲಾಗುತ್ತದೆ. ಹೀಗೆ ಸಂಘಟನೆಯನ್ನು ಬಲಪಡಿಸಿಕೊಂಡು ಮತಗಟ್ಟೆ ಮೂಲಕ ಗೆಲ್ಲುವ ಗುರಿಯನ್ನು ಬಿಜೆಪಿ ಹೊಂದಿದೆ ಎಂದರು.