ಕರ್ನಾಟಕ

karnataka

ETV Bharat / city

ಬಿಜೆಪಿ ಕಾಂಗ್ರೆಸ್​ನ ಅಲ್ಪಸಂಖ್ಯಾತರನ್ನು ಸೆಳೆಯುವ ತಂತ್ರ ರೂಪಿಸುತ್ತಿದೆ: ರಮಾನಾಥ ರೈ - ಮಂಗಳೂರು ಮಹಾನಗರ ಪಾಲಿಕೆ ನ್ಯೂಸ್​

ಕಾಂಗ್ರೆಸ್​ನಲ್ಲಿದ್ದ ಅಲ್ಪಸಂಖ್ಯಾತರನ್ನು ಸೆಳೆಯುವ ತಂತ್ರವನ್ನು ಬಿಜೆಪಿ ರೂಪಿಸುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.

ರಮಾನಾಥ ರೈ ಮಂಗಳೂರು ಸುದ್ದಿಗೋಷ್ಟಿ

By

Published : Nov 9, 2019, 8:53 PM IST

ಮಂಗಳೂರು: ಕೆಲ ದಿನಗಳಿಂದ ಕಾಂಗ್ರೆಸ್​ನಲ್ಲಿದ್ದ ಅಲ್ಪಸಂಖ್ಯಾತರನ್ನು ಬಿಜೆಪಿ ಸೆಳೆಯುವ ತಂತ್ರ ರೂಪಿಸುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.

ರಮಾನಾಥ ರೈ ಸುದ್ದಿಗೋಷ್ಟಿ

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಐದು ಬಾರಿ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಆಡಳಿತ ನಿರ್ವಹಿಸಿರುವ ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯದ ಜನರಿಗೆ ಮನ್ನಣೆ ನೀಡಿ ಉತ್ತಮ ಅಧಿಕಾರ ಕೊಟ್ಟಿದೆ. ಆದರೆ ಅಲ್ಪಸಂಖ್ಯಾತರ ಮೇಲೆ ಪ್ರತ್ಯಕ್ಷ ಹಾಗು ಪರೋಕ್ಷವಾಗಿ ದಾಳಿ ನಡೆಸುತ್ತಿದ್ದ ಬಿಜೆಪಿಗರು ಈಗ ಕೆಲ ದಿನಗಳಿಂದ ಕಾಂಗ್ರೆಸ್​ನಲ್ಲಿದ್ದ ಅಲ್ಪಸಂಖ್ಯಾತರನ್ನು ತನ್ನೆಡೆ ಸೆಳೆಯುವ ತಂತ್ರ ರೂಪಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಎಲ್ಲಾ ಜಾತಿ, ಮತದವರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತ ಮಾಡುತ್ತಿದೆ ಎಂದು ಹೇಳಿದರು.

ABOUT THE AUTHOR

...view details