ಮಂಗಳೂರು:ಅನರ್ಹ ಶಾಸಕರ ಕ್ಷೇತ್ರದಲ್ಲಿ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಕೆಲವು ಕ್ಷೇತ್ರಗಳಲ್ಲಿ ಇಡುಗಂಟು ಸಿಗುವುದಿಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ ಭವಿಷ್ಯ ನುಡಿದಿದ್ದಾರೆ.
ಕೆಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ಗೆ ಇಡುಗಂಟೂ ಸಿಗುವುದಿಲ್ಲ: ಡಿ.ವಿ.ಸದಾನಂದ ಗೌಡ - ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ
ಈ ಬಾರಿ ಜರುಗುವ ಉಪಚುನಾವಣೆಯಲ್ಲಿ ಕಾಂಗ್ರೆಸ್ಗೆ ಕೆಲವು ಕ್ಷೇತ್ರಗಳಲ್ಲಿ ಇಡುಗಂಟೂ ಸಿಗುವುದಿಲ್ಲ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ
ಮಂಗಳೂರಿನಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನಲ್ಲಿ ನಡೆದ ವಿದ್ಯಮಾನಗಳಿಂದ ಸಿದ್ದರಾಮಯ್ಯ ಅವರು ಹತಾಶರಾಗಿದ್ದಾರೆ. ಶಿಷ್ಯರೇ ಅವರ ಮೇಲೆ ಸಿಟ್ಟಾಗಿ ದೂರ ಹೋಗಿದ್ದಾರೆ. ಒತ್ತಡ ಏರಿ ಪ್ರತಿಪಕ್ಷದ ನಾಯಕ ಸ್ಥಾನ ಪಡೆದುಕೊಂಡಿದ್ದಾರೆ ಎಂದು ಆರೋಪಿಸಿದರು.
ಕಾಂಗ್ರೆಸ್‌ನಲ್ಲಿ ಮೂಲ ಕಾಂಗ್ರೆಸ್, ವಲಸೆ ಕಾಂಗ್ರೆಸ್ ಎಂಬ ಕಂದಕ ಸೃಷ್ಟಿಯಾಗಿದೆ. ಈ ಕಂದಕ ಮುಚ್ಚಲು ಸಾಧ್ಯವಿಲ್ಲ. ಬಿಜೆಪಿ ಸರ್ಕಾರ ರಚನೆಯಾದ ಕೂಡಲೇ ಉಪಚುನಾವಣೆ ತಯಾರಿ ನಡೆಸಿದೆ. ಕಾಶ್ಮೀರ, ರಾಮಮಂದಿರ ವಿಚಾರಗಳು ಸಕಾರಾತ್ಮಕ ಜನಾದೇಶ ಕೊಡುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.