ಮಂಗಳೂರು: ನಗರದೆಲ್ಲೆಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು, ಸುಮಾರು 143 ಕಾರಿನ ಟಿಂಟ್ಗಳನ್ನು ತೆಗೆಸಿ, ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಮಂಗಳೂರಲ್ಲಿ ಕಾರುಗಳ ಟಿಂಟ್ಗೆ ಬಿತ್ತು ಬ್ರೇಕ್ - ಕಾರು ಟಿಂಟ್
ಮಂಗಳೂರು ನಗರದೆಲ್ಲೆಡೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸರು, ಸುಮಾರು 143 ಕಾರಿನ ಟಿಂಟ್ಗಳನ್ನು ತೆಗೆಸಿದ್ದಾರೆ.
ಕಾರುಗಳ ಟಿಂಟ್ಗೆ ಬ್ರೇಕ್
ಇತ್ತೀಚೆಗೆ ಪೊಲೀಸ್ ಆಯುಕ್ತರ ಫೋನ್ ಇನ್ ಕಾರ್ಯಕ್ರಮದಲ್ಲಿ ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆ ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಕ್ಷಿಪ್ರ ಕಾರ್ಯಾಚರಣೆ ನಡೆಸಲು ಟ್ರಾಫಿಕ್ ಪೊಲೀಸರಿಗೆ ಆದೇಶ ನೀಡಿದ್ದರು.
ಹೀಗಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರು ಸುಮಾರು 143 ಕಾರುಗಳ ವಿರುದ್ಧ ಪ್ರಕರಣ ದಾಖಲಿಸಿ 14,300 ರೂಪಾಯಿ ದಂಡ ವಿಧಿಸಿದ್ದಾರೆ.