ಬಂಟ್ವಾಳ: ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನಕ್ಕೆ ರಾಜ್ಯ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಕುಟುಂಬ ಸಮೇತರಾಗಿ ಭೇಟಿ ನೀಡಿ, ದೇವರ ದರ್ಶನ ಪಡೆದರು.
ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನಕ್ಕೆ ಬೈರತಿ ಬಸವರಾಜ್ ಭೇಟಿ - Byrathi Basavaraj visits the Phoolli Sri Rajarajeshwari Temple
ದಕ್ಷಿಣ ಕನ್ನಡದ ಪುಣ್ಯಕ್ಷೇತ್ರಗಳಲ್ಲೊಂದಾದ ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನಕ್ಕೆ ಬೈರತಿ ಬಸವರಾಜ್ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ, ದೇವರ ದರ್ಶನ ಪಡೆದರು.
![ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನಕ್ಕೆ ಬೈರತಿ ಬಸವರಾಜ್ ಭೇಟಿ ಪೊಳಲಿ ಶ್ರೀರಾಜರಾಜೇಶ್ವರಿ ದೇವಸ್ಥಾನ](https://etvbharatimages.akamaized.net/etvbharat/prod-images/768-512-10914155-thumbnail-3x2-lek.jpg)
ದೇವರ ದರ್ಶನ ಪಡೆದ ಬಳಿಕ ಮಾತನಾಡಿದ ಭೈರತಿ ಬಸವರಾಜ್, ಪೊಳಲಿ ದಕ್ಷಿಣ ಕನ್ನಡದ ಪುಣ್ಯಕ್ಷೇತ್ರಗಳಲ್ಲೊಂದು. ಇಲ್ಲಿಗೆ ಬಂದು ದೇವರ ದರ್ಶನ ಪಡೆಯುವ ಇಚ್ಛೆ ಹೊಂದಿದ್ದೆ, ಹಾಗಾಗಿ ಬಂದಿದ್ದೇನೆ. ಪ್ರಶಾಂತವಾದ ವಾತಾವರಣ ಮನಸ್ಸಿಗೆ ಮುದ ನೀಡುವುದರ ಜೊತೆಗೆ ಭಕ್ತಿ ಭಾವೈಕ್ಯತೆ ಮೂಡಿಸುತ್ತಿದೆ ಎಂದರು.
ದೇವಳದ ವತಿಯಿಂದ ಅನಂತ ಭಟ್ ಪ್ರಸಾದ ನೀಡಿದರು. ಜೊತೆಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಬೈರತಿ ಬಸವರಾಜ್ ಅವರಿಗೆ ದೇವರ ಸ್ಮರಣಿಕೆ ನೀಡಿ, ಶಾಲು ಹಾಕಿ ಗೌರವಿಸಿದರು. ಈ ಸಂದರ್ಭದಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷ ದೇವದಾಸ್ ಶೆಟ್ಟಿ, ಪ್ರಮುಖರಾದ ವೆಂಕಟೇಶ್ ನಾವಡ, ಸನತ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.