ಮಂಗಳೂರು: ರಸ್ತೆ ಅಪಘಾತದಲ್ಲಿ ಕ್ಯಾಂಪ್ಕೋ ಚಾಕೊಲೇಟ್ ಕಂಪನಿಯ ಮಾರ್ಕೆಟಿಂಗ್ ಮ್ಯಾನೇಜರ್ ಸಾವನ್ನಪ್ಪಿರುವ ಘಟನೆ ನಗರದ ಪಡೀಲ್ನಲ್ಲಿ ಸಂಭವಿಸಿದೆ.
ಮಂಗಳೂರಲ್ಲಿ ರಸ್ತೆ ಅಪಘಾತ: ಕ್ಯಾಂಪ್ಕೋ ಚಾಕೊಲೇಟ್ ಕಂಪನಿ ಮಾರ್ಕೆಟಿಂಗ್ ಮ್ಯಾನೇಜರ್ ಸಾವು - ಕ್ಯಾಂಪ್ಕೋ ಚಾಕಲೇಟ್ ಕಂಪೆನಿ ಮಾರ್ಕೆಟಿಂಗ್ ಮ್ಯಾನೇಜರ್ ಸಾವು
ಮಂಗಳೂರಿನ ಪಡೀಲ್ನಲ್ಲಿ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಕ್ಯಾಂಪ್ಕೋ ಚಾಕೊಲೇಟ್ ಕಂಪನಿ ಮಾರ್ಕೆಟಿಂಗ್ ಮ್ಯಾನೇಜರ್ ವಿದ್ಯಾ ಕಣ್ವತೀರ್ಥ ಮೃತಪಟ್ಟಿದ್ದಾರೆ.
ವಿದ್ಯಾ ಕಣ್ವತೀರ್ಥ
ಯುವ ಮಾರ್ಕೆಟಿಂಗ್ ಮ್ಯಾನೇಜರ್ ವಿದ್ಯಾ ಕಣ್ವತೀರ್ಥ ಮೃತ ಮ್ಯಾನೇಜರ್. ವಿದ್ಯಾ ಕಣ್ವತೀರ್ಥ ಅವರು ಇಂದು ಮಂಗಳೂರಿನ ಪಡೀಲ್ ಸಮೀಪ ಹೋಂಡಾ ಆ್ಯಕ್ಟಿವಾದಲ್ಲಿ ಹೋಗುತ್ತಿದ್ದರು. ಈ ಸಂದರ್ಭ ಲಾರಿಯೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.