ಬಂಟ್ವಾಳ(ದಕ್ಷಿಣ ಕನ್ನಡ): ನಿಷೇಧಾಜ್ಞೆ ಉಲ್ಲಂಘಿಸಿ ತಲಪಾಡಿ ಜುಮ್ಮಾ ಮಸೀದಿ ಬಳಿ ಕುಳಿತು ಹರಟೆ ಹೊಡೆಯುತ್ತಿದ್ದ ಎಂಟು ಯುವಕರ ವಿರುದ್ಧ ಪ್ರಕರಣ ದಾಖಲಿಸಿ, 6 ಬೈಕ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿಷೇಧಾಜ್ಞೆ ಉಲ್ಲಂಘಿಸಿದ ಯುವಕರ ವಿರುದ್ಧ ಪ್ರಕರಣ ದಾಖಲು: 6 ಬೈಕ್ ವಶಕ್ಕೆ
ಪೊಲೀಸ್ ಉಪನಿರೀಕ್ಷಕ ಅವಿನಾಶ್ ತಮ್ಮ ಠಾಣಾ ಸಿಬ್ಬಂದಿಯೊಂದಿಗೆ ಕೊರೊನಾ ವೈರಸ್ ಕುರಿತು ಜಾಗೃತಿ ಮೂಡಿಸುತ್ತಿದ್ದ ಸಂದರ್ಭದಲ್ಲಿ ಯುವಕರು ಗುಂಪು ಸೇರಿದ್ದು ಕಂಡು ಬಂದಿದೆ.
ಬಂಟ್ವಾಳ ಪೊಲೀಸ್ ಠಾಣೆ
ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ. ಆದರೂ ಯವಕರು ಗುಂಪು ಸೇರಿದ್ದರು. ಮಸೀದಿಯ ಹೊರಗೆ ಬೈಕ್ಗಳನ್ನು ನಿಲ್ಲಿಸಿ ಮಾತನಾಡುತ್ತಿದ್ದ ಯುವಕರು, ಪೊಲೀಸರು ಬರುತ್ತಿದ್ದಂತೆ ಅಲ್ಲಿಂದ ಕಾಲ್ಕಿತ್ತರು.
ಬೈಕ್ಗಳನ್ನು ವಶಕ್ಕೆ ಪಡೆದ ಪೊಲೀಸರು, ನಿಷೇಧಾಜ್ಞೆ ಉಲ್ಲಂಘಿಸಿದ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.