ಕರ್ನಾಟಕ

karnataka

ETV Bharat / city

ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಶ್ರೀಕ್ಷೇತ್ರ ಧರ್ಮಸ್ಥಳ ಭೇಟಿ - ದಕ್ಷಿಣ ಕನ್ನಡ ಸುದ್ದಿ

ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಜೊತೆ ವಿವಿಧ ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ.

Central minister Sarbanand Sonowal visits Dharmasthala
ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಧರ್ಮಸ್ಥಳ ಭೇಟಿ

By

Published : Sep 26, 2021, 12:02 AM IST

ಬೆಳ್ತಂಗಡಿ, ದಕ್ಷಿಣ ಕನ್ನಡ:ಕೇಂದ್ರ ಬಂದರು, ಹಡಗು ಹಾಗೂ ಜಲಸಾರಿಗೆ ಸಚಿವ ಸರ್ಬಾನಂದ ಸೋನೋವಾಲ್ ಎರಡು ದಿನಗಳ ಕರ್ನಾಟಕ ಕರಾವಳಿ ಪ್ರವಾಸದಲ್ಲಿದ್ದು, ಶನಿವಾರ ಸಂಜೆ ಧರ್ಮಸ್ಥಳಕ್ಕೆ ಭೇಟಿ‌ ನೀಡಿದರು.

ಸಂಜೆ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಅವರು ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರ ಜೊತೆ ವಿವಿಧ ವಿಚಾರಗಳ ಕುರಿತು ಸಮಾಲೋಚನೆ ನಡೆಸಿದರು.

ಧರ್ಮಸ್ಥಳಕ್ಕೆ ಆಗಮಿಸಿದ ‌ಸೋನೋವಾಲ್ ಅವರನ್ನು ದೇವಸ್ಥಾನದ ವತಿಯಿಂದ ಬರಮಾಡಿಕೊಳ್ಳಲಾಯಿತು‌. ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ:ಕೊನೆ ದಿನ ಸದನವನ್ನು ಕಾಂಗ್ರೆಸ್ ಬಹಿಷ್ಕರಿಸಿದ್ದು ನೋವು ತಂದಿದೆ: ಸಚಿವ ಈಶ್ವರಪ್ಪ

ABOUT THE AUTHOR

...view details