ಮಂಗಳೂರು:ಎಂಡಿಎಫ್ ಮೂಲಕ ಮುಸ್ಲಿಂ ಮಹಿಳೆಯರಿಗೆ, ಮನೆಯಿಂದ ಆಚೆ ಬರೋವಾಗ ಬುರ್ಖಾ ಹಾಕಿರಬೇಕು. ಸೆಲ್ಫಿ ತೆಗೆದುಕೊಳ್ಳುವುದಕ್ಕೂ ಬುರ್ಖಾ ತೆಗೆದರೆ ಎಚ್ಚರಿಕೆ ನೀಡುತ್ತಾರೆ. ಇದು ಸಮಾಜದಲ್ಲಿ ಆತಂಕವನ್ನು ಸೃಷ್ಟಿ ಮಾಡುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಇದನ್ನು ಸರಿ ಮಾಡುವುದಕ್ಕೆ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಚಕ್ರವರ್ತಿ ಸೂಲಿಬೆಲೆ ಒತ್ತಾಯಿಸಿದ್ದಾರೆ.
ಮುಸ್ಲಿಮರು ಬಹಿರಂಗ ಬೆದರಿಕೆ ಹಾಕುತ್ತಿದ್ದು, ಇದರಲ್ಲಿ ಸರ್ಕಾರದ ವೈಫಲ್ಯ ಎದ್ದು ಕಾಣುತ್ತಿದೆ. ಬಹಿರಂಗವಾಗಿ ಕಲ್ಲೆಸೆಯುತ್ತಾರೆ. ಹಾಡಹಗಲೇ ಹತ್ಯೆ ಮಾಡುತ್ತಾರೆ. ಇದು ಸರಕಾರದ ದಿವಾಳಿತನವನ್ನು ತೋರ್ಪಡಿಸುತ್ತದೆ. ಶಿವಮೊಗ್ಗದಲ್ಲಿ ಹತ್ಯೆಯಾದಾಗ ಉತ್ತರಪ್ರದೇಶ ಮಾದರಿಯಲ್ಲಿ ಇಬ್ಬರನ್ನು ಎನ್ಕೌಂಟರ್ ಮಾಡಿ ಬಿಸಾಡಬೇಕಿತ್ತು. ಬುಲ್ಡೋಜರ್ ತಂದು ಮನೆಗಳನ್ನು ಉರುಳಿಸಬೇಕಿತ್ತು. ಆದರೆ ಎಲ್ಲರೂ ಮುಸ್ಲಿಮರ ಮತಕ್ಕಾಗಿ ಹಪಹಪಿಸಿ ಸಹಿಸಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.