ಮಂಗಳೂರು: ನಗರದ ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿ ವಕೀಲ ಕೆಎಸ್‌ಎನ್ ರಾಜೇಶ್ ವಿರುದ್ಧ ಮಂಗಳೂರಿನ ಜೆಎಂಎಫ್‌ಸಿ ಮೂರನೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಪೊಲೀಸರು ಸಲ್ಲಿಸಿದ್ದಾರೆ.
25 ಸೆಪ್ಟಂಬರ್ 2021ರಂದು ಮಧ್ಯಾಹ್ನ ರಾಜೇಶ್ ತನ್ನ ಕಚೇರಿಯಲ್ಲಿ ಇಂಟರ್ನ್ಶಿಪ್ಗೆಂದು ಬಂದಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದನು. ಅಷ್ಟೇ ಅಲ್ಲ ಆಕೆಗೆ ಜೀವಬೆದರಿಕೆ ಹಾಕಿದ್ದ. ಪ್ರಕರಣ ದಾಖಲಾದ ಬಳಿಕ ಆರೋಪಿ ರಾಜೇಶ್ ತುಂಬಾ ದಿನಗಳವರೆಗೆ ತಲೆ ಮರೆಸಿಕೊಂಡಿದ್ದನು. ಪೊಲೀಸರಿಗೆ ಆರೋಪಿ ಸಿಕ್ಕಿಬಿದ್ದಿದ್ದನು. ಆತನಿಗೆ ಅನಂತ ಭಟ್ ಮತ್ತು ಅಚ್ಯುತ ಭಟ್ ನೆರವು, ಆಶ್ರಯ ಒದಗಿಸಿದ್ದರು ಎಂದು ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.
ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಅವರು ತನಿಖೆಯನ್ನು ಅಂದಿನ ಎಸಿಪಿ ರಂಜಿತ್ ಬಂಡಾರು ಅವರಿಗೆ ವಹಿಸಿದ್ದರು. ಅನಂತರ ಎಸಿಪಿ ದಿನಕರ ಶೆಟ್ಟಿ ತನಿಖೆ ಮುಂದುವರಿಸಿ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ವಕೀಲನಿಂದ ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ: 25 ಸೆಪ್ಟಂಬರ್ 2021ರಂದು ಮಧ್ಯಾಹ್ನ ರಾಜೇಶ್ ತನ್ನ ಕಚೇರಿಯಲ್ಲಿ ಇಂಟರ್ನ್ಶಿಪ್ಗೆಂದು ಬಂದಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ವೇಳೆ, ಸಂತ್ರಸ್ತೆಯ ಜೊತೆ ವಕೀಲ ಮಾತನಾಡಿರುವ ಆಡಿಯೋ ವೈರಲ್ ಆಗಿತ್ತು. ಆ ಆಡಿಯೋವನ್ನು ಎಡಿಟ್ ಮಾಡಲಾಗಿದೆ ಎಂದು ವಕೀಲರು ಉರ್ವ ಪೊಲೀಸ್ ಠಾಣೆಗೆ ಬಂದು ಆರೋಪಿಸಿದ್ದರು.