ಕರ್ನಾಟಕ

karnataka

ETV Bharat / city

ಕಡಬ ಶಾಲಾ ಮಕ್ಕಳಿಗೆ ಚಿಕನ್ ಫಾಕ್ಸ್... ಶಾಲೆಗೆ ಒಂದು ವಾರ ರಜೆ ಘೋಷಣೆ - ಮಂಗಳೂರಲ್ಲಿ ಚಿಕನ್ ಫಾಕ್ಸ್

ಶಾಲೆಯೊಂದರ ಮಕ್ಕಳಲ್ಲಿ ಚಿಕನ್ ಪಾಕ್ಸ್ ರೋಗ ಕಂಡುಬಂದ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ರಜೆ ಘೋಷಿಸುವಂತೆ ಕಡಬ ಬಿಇಒ ಸೂಚಿಸಿದ್ದಾರೆ.

chicken fox
ಶಾಲಾ ಮಕ್ಕಳಿಗೆ ಚಿಕನ್ ಫಾಕ್ಸ್

By

Published : Jun 23, 2022, 7:47 AM IST

ಕಡಬ (ದಕ್ಷಿಣ ಕನ್ನಡ):ಕಡಬದ ಖಾಸಗಿ ವಿದ್ಯಾಸಂಸ್ಥೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ಚಿಕನ್ ಪಾಕ್ಸ್ ರೋಗ ಕಂಡುಬಂದ ಹಿನ್ನೆಲೆಯಲ್ಲಿ ಶಾಲೆಗೆ ಒಂದು ವಾರ ರಜೆ ಘೋಷಿಸಲಾಗಿದೆ. ಜಿಲ್ಲಾ ಮಟ್ಟದ ಆರೋಗ್ಯಾಧಿಕಾರಿಗಳು ಶಾಲೆಗೆ ಭೇಟಿ ನೀಡಿ, ವರದಿ ನೀಡಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರಜೆ ಘೋಷಿಸಲಾಗಿದೆ.

ಕಡಬದ ಶಿಕ್ಷಣ ಸಂಸ್ಥೆಯೊಂದರಲ್ಲಿ ಕೆಲ ದಿನಗಳ ಹಿಂದೆ ಕೆಲವು ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡಿದ್ದ ಚಿಕನ್ ಫಾಕ್ಸ್ ರೋಗವು ಇದೀಗ ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಹರಡಿದೆ ಎನ್ನಲಾಗಿದೆ. ಈ ಕುರಿತು ಈಟಿವಿ ಭಾರತಕ್ಕೆ ಪ್ರತಿಕ್ರಿಯಿಸಿದ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್.ಬಿ, ಸುಮಾರು 40 ರಷ್ಟು ವಿದ್ಯಾರ್ಥಿಗಳಿಗೆ ಚಿಕನ್ ಪಾಕ್ಸ್ ತಗುಲಿರುವ ವರದಿಯನ್ನು ತಾಲೂಕು ಆರೋಗ್ಯಾಧಿಕಾರಿಗಳು ನೀಡಿದ್ದು, ಇದು ಸೂಕ್ಷ್ಮ ವಿಚಾರವಾಗಿದೆ.

ಒಬ್ಬರಿಂದ ಇನ್ನೊಬ್ಬರಿಗೆ ರೋಗ ಹರಡುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಶಾಲೆಗೆ ಒಂದು ವಾರಗಳ ಕಾಲ ರಜೆ ನೀಡುವಂತೆ ಸೂಚಿಸಿದ್ದೇನೆ ಎಂದು ಹೇಳಿದ್ದಾರೆ.

(ಇದನ್ನೂ ಓದಿ: ಅಡುಗೆ ಎಣ್ಣೆ ದರದಲ್ಲಿ ಕುಸಿತ: ಪ್ರಮುಖ ಬ್ರಾಂಡ್​ಗಳ ಬೆಲೆ 10-15 ರೂ. ಕಡಿತ)

ABOUT THE AUTHOR

...view details