ಕರ್ನಾಟಕ

karnataka

ETV Bharat / city

ಮಂಗಳೂರು ವಿಮಾನ ನಿಲ್ದಾಣದಲ್ಲಿ ಯುವಕನ ಮೇಲೆ ಹಲ್ಲೆ: ವಿಡಿಯೋ ವೈರಲ್ - ಅನಸ್ ಮೊಬೈಲ್ ನಲ್ಲಿ ಪೊಟೋ ತೆಗೆದಿದ್ದು ಇದಕ್ಕೆ ಸಿಐಎಸ್ಎಫ್ ಸಿಬ್ಬಂದಿಗಳು ಆಕ್ಷೇಪಿಸಿ

ವಿಮಾನ ನಿಲ್ದಾಣದಲ್ಲಿ ಯುವಕನೊಬ್ಬನಿಗೆ ಸಿಐಎಸ್ಎಫ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Kn_mng_02_airport_viral_visual_7202146
ಮಂಗಳೂರು ವಿಮಾನ ನಿಲ್ದಾಣದಲ್ಲಿ ಯುವಕನಿಗೆ ಸಿಐಎಸ್ಎಫ್ ಸಿಬ್ಬಂದಿಯಿಂದ ಹಲ್ಲೆ: ವಿಡಿಯೋ ವೈರಲ್

By

Published : Feb 14, 2020, 1:44 PM IST

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಯುವಕನೊಬ್ಬನಿಗೆ ಸಿಐಎಸ್ಎಫ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾನದಲ್ಲಿ ವೈರಲ್ ಆಗಿದೆ.

ಮಂಗಳೂರು ವಿಮಾನ ನಿಲ್ದಾಣದಲ್ಲಿ ಯುವಕನಿಗೆ ಸಿಐಎಸ್ಎಫ್ ಸಿಬ್ಬಂದಿಯಿಂದ ಹಲ್ಲೆ: ವಿಡಿಯೋ ವೈರಲ್

ಕೇರಳದ ಕಾಸರಗೋಡು ಜಿಲ್ಲೆಯ ಅನಸ್ ಎಂಬುವರು ತಮ್ಮ ಅಣ್ಣನನ್ನು ಗಲ್ಪ್ ಗೆ ಬಿಡಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಅನಸ್ ಮೊಬೈಲ್ ನಲ್ಲಿ ಫೋಟೋ ತೆಗೆದಿದ್ದು ಇದಕ್ಕೆ ಸಿಐಎಸ್ಎಫ್ ಸಿಬ್ಬಂದಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ ಆ ಫೋಟೋವನ್ನ ಡಿಲಿಟ್ ಮಾಡಿದ್ದರು. ಈ ವಿಚಾರದಲ್ಲಿ ಮಾತಿಗೆ ಮಾತು ಬೆಳೆದು ಸಿಐಎಸ್ಎಫ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಗೆ ಮೌಖಿಕ ದೂರು ಮಾತ್ರ ನೀಡಿದ್ದು, ಲಿಖಿತ ದೂರು ನೀಡಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ABOUT THE AUTHOR

...view details