ಮಂಗಳೂರು: ಜನರ ಭಾವನೆಗಳಿಗೆ ಧಕ್ಕೆಯಾದಾಗ ಸಹಜವಾಗಿ ಕ್ರಿಯೆ, ಪ್ರತಿಕ್ರಿಯೆಗಳು ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳೂರಿನ ನೈತಿಕ ಪೊಲೀಸ್ ಗಿರಿ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದೊಂದು ಸೂಕ್ಷ್ಮ ವಿಚಾರ. ಸಮಾಜದಲ್ಲಿ ನಾವೆಲ್ಲ ಜವಾಬ್ದಾರಿ ವಹಿಸಬೇಕು. ಭಾವನೆಗಳಿಗೆ ಧಕ್ಕೆ ಬಾರದ ರೀತಿಯಲ್ಲಿ ನಡೆದುಕೊಳ್ಳಬೇಕು. ಧಕ್ಕೆ ಬಂದಾಗ ಸಹಜವಾಗಿ ಕ್ರಿಯೆ- ಪ್ರತಿಕ್ರಿಯೆ ಆಗುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಕರ್ತವ್ಯ. ಎಲ್ಲರೂ ಸಹಕಾರ ಕೊಡಬೇಕು. ಯುವಕರು ಸಮಾಜದ ಭಾವನೆಗೆ ಧಕ್ಕೆ ಆಗದಂತೆ ವರ್ತಿಸಬೇಕು. ಸಾಮಾಜಿಕ ಪ್ರಶ್ನೆ ಇದು. ಸಮಾಜದಲ್ಲಿ ನೈತಿಕತೆ ಬೇಕು, ನೈತಿಕತೆ ಇಲ್ಲದೇ ಬದುಕಲು ಸಾಧ್ಯವಿಲ್ಲ. ಸಮಾಜದಲ್ಲಿ ಪ್ರತಿಯೊಬ್ಬರಿಗೂ ಹೊಣೆಗಾರಿಕೆ ಇದೆ ಎಂದು ಹೇಳಿದರು.
ಖಾಸಗಿ ಹೇಳಿಕೆಗಳಿಗೆ ಪ್ರತಿಕ್ರಿಯೆ ಇಲ್ಲ:
ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾಜಿ ಸಂಸದ ಉಗ್ರಪ್ಪ ಮತ್ತು ಕಾಂಗ್ರೆಸ್ ಮುಖಂಡ ಸಲೀಂ ಅವರು ನೀಡಿರುವ ಹೇಳಿಕೆಯ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು ಯಾರದ್ದೋ ಖಾಸಗಿ ಹೇಳಿಕೆಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.
2-3 ದಿನದಲ್ಲಿ 2 ರೇಕ್ ಕಲ್ಲಿದ್ದಲು ತರಿಸಲು ಪ್ರಯತ್ನ: