ಮಂಗಳೂರು:ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಕಚೇರಿ ಆರಂಭಿಸುವ ಬಗ್ಗೆ ಸುಳಿವು ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಈ ಬಗ್ಗೆ ಕೆಲವು ವಿಚಾರಗಳನ್ನು ಬಹಿರಂಗಪಡಿಸಲು ಆಗುವುದಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದರು.
ಮಂಗಳೂರಿನಲ್ಲಿ ಎನ್ಐಎ ಕಚೇರಿ ಆರಂಭ?: ಸುಳಿವು ನೀಡಿದ ಸಿಎಂ ಬೊಮ್ಮಾಯಿ - ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರು ಭೇಟಿ
ಎನ್ಐಎ ಕಚೇರಿ ಆರಂಭಿಸುವ ಬಗ್ಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಮಂಗಳೂರಿನಲ್ಲಿ ಹೇಳಿದ್ದಾರೆ.
CM Bommai hints on starting NIA office in Mangaluru
ಈಗಾಗಲೇ ಓರ್ವ ದಕ್ಷ ಗೃಹ ಸಚಿವರನ್ನು ರಾಜ್ಯಕ್ಕೆ ನೀಡಲಾಗಿದೆ. ಅವರು ಈಗಾಗಲೇ ಈ ಬಗ್ಗೆ ಎರಡು ಸಭೆ ಮಾಡಿದ್ದು, ಮುಂದೆಯೂ ಈ ನಿಟ್ಟಿನಲ್ಲಿ ಕೆಲವು ಸಭೆಗಳನ್ನು ನಡೆಸಲಿದ್ದಾರೆ. ಮುಂಬರುವ ದಿನಗಳಲ್ಲಿ ಗೃಹ ಸಚಿವರು ಇಲ್ಲಿಗೆ ಭೇಟಿ ಕೊಟ್ಟು ಪರಿಶೀಲಿಸಲಿದ್ದಾರೆ. ಆ ಬಳಿಕ ನಾವೆಲ್ಲರೂ ಒಟ್ಟಾಗಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಸಿಎಂ ಹೇಳಿದರು.