ಮಂಗಳೂರು(ದಕ್ಷಿಣ ಕನ್ನಡ): ಕೊರೊನಾ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಪ್ರಧಾನಿ ಮೋದಿ ಅವರ ಜೊತೆಗೆ ವಿಡಿಯೋ ಸಂವಾದ ನಡೆಸಲಿದ್ದಾರೆ. ಸಿಎಂ ಬೊಮ್ಮಾಯಿ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿದ್ದು, ಮೂಡಬಿದಿರೆಯಲ್ಲಿ ಕಾರ್ಯಕ್ರಮ ನಿಗದಿಪಡಿಸಲಾಗಿತ್ತು. ಪ್ರಧಾನಿ ಜೊತೆಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಬೇಕಾದ ಹಿನ್ನೆಲೆಯಲ್ಲಿ ಜಿಲ್ಲಾ ಪ್ರವಾಸದಲ್ಲಿ ಬದಲಾವಣೆ ಮಾಡಿ ಪರಿಷ್ಕೃತ ಪ್ರವಾಸ ಪಟ್ಟಿ ಮಾಡಲಾಗಿದೆ.
ಕೊರೊನಾ ನಿಯಂತ್ರಣ: ಪ್ರಧಾನಿ ಜೊತೆ ನಾಳೆ ಸಿಎಂ ಬೊಮ್ಮಾಯಿ ವಿಡಿಯೋ ಸಂವಾದ - ಸಿಎಂ ಪಿಎಂ ವಿಡಿಯೋ ಸಂವಾದ
ಸಿಎಂ ಬೊಮ್ಮಾಯಿ ನಾಳೆ ಬೆಳಿಗ್ಗೆ 11.30ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಿ 12ಗಂಟೆಗೆ ದ.ಕ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೊರೊನಾ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ಜೊತೆಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಲಿದ್ದಾರೆ.
ಪ್ರಧಾನಿ ಜೊತೆ ಸಿಎಂ ಬೊಮ್ಮಾಯಿ ವಿಡಿಯೋ ಸಂವಾದ
ಇದನ್ನೂ ಓದಿ:ಗೃಹ ಸಚಿವರ ವಜಾ ಕೋರಿ ರಾಜ್ಯಪಾಲರಿಗೆ ಆಪ್ ಮನವಿ
ಅದರಂತೆ ಬೆಳಿಗ್ಗೆ 11.30ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಿ 12ಗಂಟೆಗೆ ದ.ಕ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೊರೊನಾ ವಿಷಯಕ್ಕೆ ಸಂಬಂಧಿಸಿದಂತೆ ಪ್ರಧಾನಿ ಜೊತೆಗೆ ವಿಡಿಯೋ ಸಂವಾದದಲ್ಲಿ ಭಾಗವಹಿಸಲಿದ್ದಾರೆ. ವಿಡಿಯೋ ಸಂವಾದದ ಬಳಿಕ ಮೂಡಬಿದಿರೆಗೆ 3 ಗಂಟೆಗೆ ತೆರಳಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.