ಕರ್ನಾಟಕ

karnataka

ETV Bharat / city

ಇಡಿ ದುರ್ಬಳಕೆ ಆರೋಪ - ಮಂಗಳೂರಿನ ಐಟಿ ಕಚೇರಿಗೆ ನುಗ್ಗಲೆತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ - ಕಾಂಗ್ರೆಸ್​ ಕಾರ್ಯಕರ್ತರ ಪ್ರತಿಭಟನೆ

ಐಟಿ ಕಚೇರಿಯ ಮುಂಭಾಗದಲ್ಲಿ ಕೇಂದ್ರ ಸರ್ಕಾರದ ನಡೆ ವಿರುದ್ಧ ಘೋಷಣೆಗಳನ್ನು ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್​ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

Police have arrested former minister Ramanatha Rai
ಮಾಜಿ ಸಚಿವ ರಮಾನಾಥ ರೈ ಅವರನ್ನು ವಶಕ್ಕೆ ಪಡೆದ ಪೊಲೀಸರು

By

Published : Jun 17, 2022, 1:02 PM IST

ಮಂಗಳೂರು : ಬಿಜೆಪಿ ಸರ್ಕಾರ ಇಡಿ ಕಚೇರಿ ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಮಂಗಳೂರಿನ ಐಟಿ ಕಚೇರಿಗೆ ನುಗ್ಗಲೆತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ‌ವಶಕ್ಕೆ ಪಡೆದರು. ಇಡಿ ಕಚೇರಿ ದುರ್ಬಳಕೆ ಮಾಡಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರನ್ನು ಕೇಂದ್ರ ಬಿಜೆಪಿ ಸರ್ಕಾರ ಹಿಂಸಿಸುತ್ತಿದೆ ಎಂದು ಆರೋಪಿಸಿ ದ.ಕ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳೂರಿನ ಫಳ್ನೀರ್ ನಲ್ಲಿರುವ ಐಟಿ ಕಚೇರಿಗೆ ಮುತ್ತಿಗೆ ಯತ್ನ ನಡೆಯಿತು.

ಮಂಗಳೂರಿನ ಐಟಿ ಕಚೇರಿಗೆ ನುಗ್ಗಲೆತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ

ಐಟಿ ಕಚೇರಿಯ ಮುಂಭಾಗದಲ್ಲಿ ಕೇಂದ್ರ ಸರ್ಕಾರದ ನಡೆಯ ವಿರುದ್ಧ ಘೋಷಣೆಗಳನ್ನು ಕೂಗಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಐಟಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದಾಗ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಮಾಜಿ ಸಚಿವ ಬಿ. ರಮಾನಾಥ ರೈ, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಐವನ್ ಡಿಸೋಜ, ಮಿಥುನ್ ರೈ ಸೇರಿದಂತೆ ಹಲವು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಬಿಡುಗಡೆಗೊಳಿಸಿದರು.

ಇದನ್ನೂ ಓದಿ :ನ್ಯಾಷನಲ್​​ ಹೆರಾಲ್ಡ್​​ ಕೇಸ್​​: 10 ತಾಸು ರಾಹುಲ್​ಗೆ ಇಡಿ ಡ್ರಿಲ್​​... ಇಂದೂ ವಿಚಾರಣೆ ಸಾಧ್ಯತೆ

ABOUT THE AUTHOR

...view details