ಮಂಗಳೂರು : ಜ.6ರಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಕಾಂಗ್ರೆಸ್ ಪಕ್ಷದ ಪ್ರಥಮ ವಿಭಾಗಿಯ ಪ್ರತಿನಿಧಿ ಸಮ್ಮೇಳನ ನಡೆಯಲಿದ್ದು, ಇದರಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಮೊದಲಾದವರು ಪಾಲ್ಗೊಳ್ಳಲಿದ್ದಾರೆ ಎಂದು ಮಾಜಿ ಸಚಿವ ಬಿ. ರಮಾನಾಥ್ ರೈ ಹೇಳಿದರು.
ಮಂಗಳೂರಿನಲ್ಲಿ ಮಾತನಾಡಿದ ಅವರು, ಮೈಸೂರು ವಿಭಾಗ ಮಟ್ಟದ ಪ್ರತಿನಿಧಿ ಸಮ್ಮೇಳನವು ಬಿಸಿ ರೋಡಿನಲ್ಲಿ ನಡೆಯಲಿದೆ. ಪ್ರತಿನಿಧಿ ಸಮ್ಮೇಳನದಲ್ಲಿ 677 ಮಂದಿ ಆಹ್ವಾನಿತ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11ಗಂಟೆಗೆ ಆರಂಭವಾಗುವ ಈ ಪ್ರತಿನಿಧಿ ಸಮ್ಮೇಳನ ಸಂಜೆ 7.30ರವರೆಗೆ ನಡೆಯಲಿದೆ ಎಂದು ಮಾಹಿತಿ ನೀಡಿದರು.