ಮಂಗಳೂರು: ಯೋಗ ಮಾಡುವ ವೇಳೆ ಜಾರಿ ಬಿದ್ದು ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಅವರು ಗಾಯಗೊಂಡಿದ್ದು, ನಗರದ ಯೆನೆಪೊಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭಾನುವಾರ ಬೆಳಗ್ಗೆ ಯೋಗ ಮಾಡುವ ಸಂದರ್ಭ ಆಸ್ಕರ್ ಫೆರ್ನಾಂಡಿಸ್ ಅವರು ನಿಯಂತ್ರಣ ತಪ್ಪಿ ಜಾರಿ ಬಿದ್ದಿದ್ದರು. ಯಾವುದೇ ಗಾಯವಾಗಿಲ್ಲವೆಂದು ಇದನ್ನು ನಿರ್ಲಕ್ಷಿಸಿದ್ದರು. ಅದೇ ದಿನ ಸಂಜೆ ಡಯಾಲಿಸಿಸ್‌ಗೆಂದು ಯೆನೆಪೊಯ ಆಸ್ಪತ್ರೆಗೆ ತೆರಳಿದ್ದರು.