ಬಂಟ್ವಾಳ : ಪಾಕ್ ಪರ ಘೋಷಣೆ ಹಾಕುವವರು ನೆನಪಿಟ್ಟುಕೊಳ್ಳಬೇಕು, ದೇಶದ್ರೋಹಿಗಳ ಬಗ್ಗೆ ರಾಜ್ಯ ಸರ್ಕಾರ ಬಿಗು ಕ್ರಮ ಕೈಗೊಳ್ಳುತ್ತಿದೆ. ಕಾಂಗ್ರೆಸ್ ಬೆಂಬಲ ಕೊಟ್ಟ ಕಾರಣ ಇವರಿಗೆ ಈ ಸೊಕ್ಕು ಬಂದಿದೆ. ಅಲ್ಲದೆ, ಘಟನೆಯನ್ನು ಕಾಂಗ್ರೆಸ್ ಯಾಕೆ ಖಂಡಿಸಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಪ್ರಶ್ನಿಸಿದರು.
ಉಜಿರೆಯಲ್ಲಿ ಪಾಕ್ ಪರ ಘೋಷಣೆ, ಕಾಂಗ್ರೆಸ್ ಯಾಕೆ ಖಂಡಿಸಿಲ್ಲ : ಸಚಿವ ಕೆ ಎಸ್ ಈಶ್ವರಪ್ಪ - ಉಜಿರೆಯಲ್ಲಿ ಪಾಕ್ ಪರ ಘೋಷಣೆ
ರಾಜ್ಯದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ. ಕೆಲವೇ ತಿಂಗಳಲ್ಲಿ ಕಾಂಗ್ರೆಸ್ ಪಕ್ಷ ಧೂಳೀಪಟವಾಗಲಿದೆ ಎಂದು ಭವಿಷ್ಯ ನುಡಿದರು. ಅಲ್ಲದೆ, ಜನಸೇವಕ ಸಮಾವೇಶದ ತಮ್ಮ ಭಾಷಣದಲ್ಲೂ ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎರಡು ಗ್ರಾಪಂಗಳನ್ನು ಗೆದ್ದವರು ಇಂದು ಪಾಕಿಸ್ತಾನ್ ಜಿಂದಾಬಾದ್ ಎನ್ನುತ್ತಿದ್ದಾರೆ..
ನಗರದಲ್ಲಿ ನಡೆದ ಜನಸೇವಕ ಸಮಾವೇಶ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದಾಗ, ಉಜಿರೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಈಶ್ವರಪ್ಪ, ದೇಶ ವಿರೋಧಿ ಆಟ ನಮ್ಮ ದೇಶದಲ್ಲಿ ನಡೆಯೋದಿಲ್ಲ. ದೇಶದ್ರೋಹಿ ಚಟುವಟಿಕೆಗಳನ್ನು ಮಾಡುವವರ ವಿರುದ್ಧ ನಾವು ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ. ಕೆಲವೇ ತಿಂಗಳಲ್ಲಿ ಕಾಂಗ್ರೆಸ್ ಪಕ್ಷ ಧೂಳೀಪಟವಾಗಲಿದೆ ಎಂದು ಭವಿಷ್ಯ ನುಡಿದರು. ಅಲ್ಲದೆ, ಜನಸೇವಕ ಸಮಾವೇಶದ ತಮ್ಮ ಭಾಷಣದಲ್ಲೂ ದೇಶದ್ರೋಹಿ ಘೋಷಣೆ ಕೂಗಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಎರಡು ಗ್ರಾಪಂಗಳನ್ನು ಗೆದ್ದವರು ಇಂದು ಪಾಕಿಸ್ತಾನ್ ಜಿಂದಾಬಾದ್ ಎನ್ನುತ್ತಿದ್ದಾರೆ ಎಂದು ಹರಿಹಾಯ್ದ ಈಶ್ವರಪ್ಪ, ಇದಕ್ಕೆಲ್ಲಾ ಕಾಂಗ್ರೆಸ್ ಪೋಷಣೆಯೇ ಕಾರಣ ಎಂದು ದೂರಿದರು.