ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ರಾಜಕಾರಣಿ, ಕೇಂದ್ರ ಮಾಜಿ ಸಚಿವರೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದೆ.
ಕರಾವಳಿ ಭಾಗದ ಕೇಂದ್ರ ಮಾಜಿ ಸಚಿವರಿಗೆ ವಕ್ಕರಿಸಿತು ಮಹಾಮಾರಿ ಕೊರೊನಾ! - ದಕ್ಷಿಣ ಕನ್ನಡ ಜಿಲ್ಲಾ ಸುದ್ದಿ
ಕರಾವಳಿ ಭಾಗದ ಪ್ರಭಾವಿ ಕಾಂಗ್ರೆಸ್ ರಾಜಕಾರಣಿ, ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದ ಕೇಂದ್ರ ಮಾಜಿ ಸಚಿವರೊಬ್ಬರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಶನಿವಾರ ಅವರ ಪತ್ನಿಗೆ ಸೋಂಕು ತಗಲಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೋವಿಡ್ ಸೋಂಕು ಕರಾವಳಿಯಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಸದಾ ಮನೆಯಲ್ಲೇ ಇರುವ ಹಿರಿಯ ರಾಜಕಾರಣಿ ಮನೆಗೂ ತಲುಪಿರುವುದು ಆತಂಕಕ್ಕೆ ಕಾರಣವಾಗಿದೆ.
ಇಂದಿರಾಗಾಂಧಿ ಕಾಲದಿಂದಲೇ ಕೇಂದ್ರದಲ್ಲಿ ಪ್ರಭಾವಿ ರಾಜಕಾರಣಿಯಾಗಿ ದುಡಿದಿರುವ ಅವರು ಕರಾವಳಿಯಲ್ಲಿ ಕಾಂಗ್ರೆಸ್ ಪಕ್ಷದ ಬೆಳವಣಿಗೆಗೆ ಕೊಡುಗೆ ನೀಡಿದವರು. ಸೋಂಕು ತಗಲಿದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಸೋಂಕು ಲಕ್ಷಣ ಇಲ್ಲದಿದ್ದರೂ ಪಾಸಿಟಿವ್ ಎಂದು ಬಂದಿದೆ. ಆದ್ರೆ ಅವರು ಶೀಘ್ರ ಚೇತರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ.