ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 153 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, 7 ಜನರು ಸಾವನ್ನಪ್ಪಿದ್ದಾರೆ.
ದ.ಕ.ಜಿಲ್ಲೆಯಲ್ಲಿಂದು 153 ಮಂದಿಗೆ ಕೊರೊನಾ...7 ಜನರು ಸಾವು - DakshinaKannada Corona Case
ದಕ್ಷಿಣ ಕನ್ನಡ ಜಿಲ್ಲೆಯಲ್ಲಿಂದು 153 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 6,168ಕ್ಕೆ ಏರಿಕೆಯಾಗಿದೆ.
ದ.ಕ.ಜಿಲ್ಲೆಯಲ್ಲಿಂದು 153 ಮಂದಿಗೆ ಕೊರೊನಾ...7 ಜನರು ಸಾವು
ಮಂಗಳೂರಿನ 119 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದರೆ, ಬಂಟ್ವಾಳದಲ್ಲಿ 11, ಬೆಳ್ತಂಗಡಿಯಲ್ಲಿ 6, ಪುತ್ತೂರಿನಲ್ಲಿ 4, ಸುಳ್ಯದಲ್ಲಿ ಓರ್ವರಿಗೆ ಸೋಂಕು ಪತ್ತೆಯಾಗಿದೆ. ಅಲ್ಲದೆ, ಹೊರ ಜಿಲ್ಲೆಯಿಂದ ಬಂದಿರುವ 12 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 6,168ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 176ಕ್ಕೆ ಏರಿಕೆಯಾಗಿದೆ.
ಇಂದು ಸೋಂಕಿನಿಂದ ಗುಣಮುಖರಾಗಿ 124 ಮಂದಿ ಮನೆಗೆ ತೆರಳಿದ್ದು, ಈವರೆಗೆ ಒಟ್ಟು 2,854 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3,138 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ.