ಮಂಗಳೂರು:ನಗರದಲ್ಲಿ ಕೊರೊನಾ ಸೋಂಕಿಗೆ ಮದ್ದು ಸಿಂಪಡಿಸಲಾಗುತ್ತದೆ. ಆದ್ದರಿಂದ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5ರವರೆಗೆ ಯಾರೂ ಹೊರಗೆ ಬರಬಾರದು ಎಂಬ ಸುದ್ದಿ ಸಂಸ್ಥೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದು ಶುದ್ಧ ಸುಳ್ಳು ಎಂದು ದಕ್ಷಿಣ ಕನ್ನಡ ಜಿಲ್ಲಾಡಳಿತ ಸ್ಪಷ್ಟಪಡಿಸಿದೆ.
ಕೊರೊನಾ ಸೋಂಕು: ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಜಿಲ್ಲಾಡಳಿತ ಸ್ಪಷ್ಟನೆ - Action to spread false news
ಕೊರೊನಾ ಸೋಂಕಿನ ಬಗ್ಗೆ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿ, ವದಂತಿಗಳನ್ನು ಹಬ್ಬಿಸುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.

ಸುಳ್ಳು ಸುದ್ದಿ ಹರಡುವವರ ವಿರುದ್ಧ ಕ್ರಮ ಜಿಲ್ಲಾಡಳಿತ ಸ್ಪಷ್ಟನೆ
ಅಲ್ಲದೆ, ಈ ರೀತಿಯಲ್ಲಿ ಸಾರ್ವಜನಿಕರಿಗೆ ತಪ್ಪು ಸಂದೇಶಗಳನ್ನು ಹರಿಬಿಡುತ್ತಿರುವ ಸಾಮಾಜಿಕ ಜಾಲತಾಣಗಳ ವಿರುದ್ಧ ಕ್ರಮ ಜರುಗಿಸಲು ಈಗಾಗಲೇ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಲಾಗಿದೆ.