ಮಂಗಳೂರು: ಜಿಲ್ಲೆಯಲ್ಲಿ ಮೊದಲ ಬಾರಿಗೆ ವೈದ್ಯರಿಗೆ ಕೊರೊನಾ ದೃಢಪಟ್ಟಿದೆ. ಇಂದು ಒಂದೇ ದಿನ ಐವರು ವೈದ್ಯರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಭಾರೀ ಆತಂಕ ಸೃಷ್ಟಿಸಿದೆ.
ಮಂಗಳೂರಿನಲ್ಲಿ ಇಂದು ಐವರು ವೈದ್ಯರಿಗೆ ಕೊರೊನಾ: ಹೆಚ್ಚಿದ ಆತಂಕ - ಮಂಗಳೂರು ವೈದ್ಯರಿಗೆ ಕೊರೊನಾ ಪತ್ತೆ ನ್ಯೂಸ್
ಮಂಗಳೂರಿನಲ್ಲಿ ಇಂದು ಒಂದೇ ದಿನ ಐವರು ವೈದ್ಯರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಬಗ್ಗೆ 'ಈಟಿವಿ ಭಾರತ'ಕ್ಕೆ ಪ್ರತಿಕ್ರಿಯಿಸಿರುವ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯರಿ, ಕೆಎಂಸಿಯಲ್ಲಿ ಸ್ನಾತಕೋತ್ತರ ಪದವಿ ಓದುತ್ತಿರುವ ಐದು ವೈದ್ಯ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಇವರು ಮಂಗಳೂರಿನ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಲ್ಲ. ಕೆಎಂಸಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು. ಅವರನ್ನು ಅದೇ ಆಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
28 ವರ್ಷದ ವೈದ್ಯ, 28 ವರ್ಷದ ಇಬ್ಬರು ವೈದ್ಯೆಯರು, 27 ವರ್ಷದ ಇಬ್ಬರು ವೈದ್ಯೆಯರಿಗೆ ಕೊರೊನಾ ದೃಢಪಟ್ಟಿದೆ. ಇವರು ಮಂಗಳೂರಿನ ಒಂದೇ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು ಎನ್ನಲಾಗಿದೆ.