ಮಂಗಳೂರು: ಚೀನಾದಲ್ಲಿ ಪತ್ತೆಯಾಗಿರುವ ಕೊರೊನಾ XE ರೂಪಾಂತರಿ ಒಮಿಕ್ರಾನ್ನಂತೆ ವೇಗವಾಗಿ ಹರಡುವ ಗುಣಲಕ್ಷಣಗಳನ್ನು ಹೊಂದಿದೆ ಎಂಬ ಮಾಹಿತಿಗಳಿವೆ. ರಾಜ್ಯದಲ್ಲಿ ಈ ರೂಪಾಂತರಿ ಪತ್ತೆಯಾಗಿಲ್ಲ. ಆದರೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿದಿನ 500 ಮಂದಿಯ ಕೊರೊನಾ ತಪಾಸಣೆ ನಡೆಸಲಾಗುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿತ್ಯ 300 ಮಂದಿಯ ಕೊರೊನಾ ತಪಾಸಣೆ ಗುರಿಯನ್ನು ನೀಡಲಾಗಿದೆ. ಪ್ರತಿದಿನ 450 ರಿಂದ 500 ಮಂದಿಯ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಸಣ್ಣ ಪ್ರಮಾಣದಲ್ಲಿ ಪತ್ತೆಯಾಗುತ್ತಿದ್ದು, ಅವರ ಪ್ರಾಥಮಿಕ ಸಂಪರ್ಕಿತರನ್ನು ತಪಾಸಣೆ ಮಾಡಲಾಗುತ್ತಿದೆ ಎಂದರು.