ಮಂಗಳೂರು: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ನಡೆಸುತ್ತಿರುವ ಪ್ರತಿಭಟನೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮಂಗಳೂರು ಕೇಂದ್ರ ಉಪವಿಭಾಗದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಮಂಗಳೂರಲ್ಲಿ ನಿಯಂತ್ರಣಕ್ಕೆ ಬರದ ಪ್ರತಿಭಟನೆ: ಪೊಲೀಸರಿಂದ ಕರ್ಫ್ಯೂ ಜಾರಿ
ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಮಂಗಳೂರಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಉದ್ರಿಕ್ತರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಯೋಗಿಸಿದ್ದಾರೆ. ಅಲ್ಲದೆ, ಪ್ರತಿಭಟನೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮಂಗಳೂರು ಕೇಂದ್ರ ಉಪವಿಭಾಗದಲ್ಲಿ ಕರ್ಫ್ಯೂ ಜಾರಿ ಮಾಡಲಾಗಿದೆ.
ಮಂಗಳೂರಿನಲ್ಲಿ ಕರ್ಪ್ಯೂ ಜಾರಿ ಮಾಡಲಾಗಿದೆ
ಬಂದರು, ಪಾಂಡೇಶ್ವರ, ಕದ್ರಿ, ಬರ್ಕೆ ಮತ್ತು ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಡಿಸೆಂಬರ್ 20 ರವರೆಗೆ ಕರ್ಫ್ಯೂ ಆದೇಶ ಹೊರಡಿಸಲಾಗಿದೆ.
ನಿಷೇಧಾಜ್ಞೆ ಘೋಷಣೆ ನಡುವೆ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಬಂದರು ಪೊಲೀಸ್ ಠಾಣೆ ಬಳಿ ಹಿಂಸಾಚಾರ ನಡೆದಿದೆ. ಹಿಂಸಾಚಾರ ನಿಯಂತ್ರಣಕ್ಕೆ ಬರದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ಪಿ.ಎಸ್ ಹರ್ಷ ಅವರು ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ.