ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ 34.32 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕ ತನ್ನ ದೇಹದಲ್ಲಿ ಚಿನ್ನವನ್ನು ಅಡಗಿಸಿ ಸಾಗಾಟ ಮಾಡಲು ಯತ್ನಿಸಿದ್ದ. ನಿನ್ನೆ ದುಬೈನಿಂದ ಬಂದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವನ್ನು ತಪಾಸಣೆ ನಡೆಸಿದಾಗ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.