ಕರ್ನಾಟಕ

karnataka

ETV Bharat / city

ಸಹಜ ಸ್ಥಿತಿಯತ್ತ ದಕ್ಷಿಣ ಕನ್ನಡ.. ಕೊರೊನಾ ಮಾರ್ಗಸೂಚಿ ಪಾಲನೆ ಅಷ್ಟಕಷ್ಟೇ..

ಸಾರ್ವಜನಿಕ ಸಾರಿಗೆಗಳಲ್ಲಿ ಓಡಾಟ ಮತ್ತು ಸಮಾರಂಭಗಳಲ್ಲಿ ಭಾಗವಹಿಸುವುದು, ಜನರ ಗುಂಪುಗೂಡುವಿಕೆ ಮಾಡಬಾರದು. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಟ್ಟುನಿಟ್ಟಾಗಿ ಪಾಲಿಸಿ ಎಂದು ವೈದ್ಯರು ಸಲಹೆ ನೀಡುತ್ತಾರೆ..

Mangalore city
ಮಂಗಳೂರು ನಗರ

By

Published : Oct 6, 2020, 4:39 PM IST

ಮಂಗಳೂರು:ಲಾಕ್​​ಡೌನ್​ನಿಂದ ಸ್ತಬ್ದಗೊಂಡಿದ್ದ ಜನಜೀವನ ಅನ್​ಲಾಕ್​ ಬಳಿಕ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೆ, ಜನರು ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸದ ಕಾರಣ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ಈ ನಿಟ್ಟಿನಲ್ಲಿ ಎಚ್ಚರ ಅಗತ್ಯ.

ಲಾಕ್​​ಡೌನ್​ನಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯೇ ಇದ್ದವು. ಆದರೆ, ಲಾಕ್​​ಡೌನ್ ಸಡಿಲಗೊಳ್ಳುತ್ತಿದ್ದಂತೆ ಒಂದೇ ಸಮನೆ ಏರಿದವು. ಅದಕ್ಕೆ ಜನ ಸಂಚಾರ ಹೆಚ್ಚಾಗಿದ್ದೇ ಕಾರಣ. ಹೀಗಾಗಿ, ಓಡಾಡುವಾಗ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಮತ್ತು ಸ್ಯಾನಿಟೈಸರ್​ ಬಳಸುವುದು ಬಹಳ ಮುಖ್ಯ.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ನವೀನ್ ಚಂದ್ರ

ಸಾರ್ವಜನಿಕ ಸಾರಿಗೆಗಳಲ್ಲಿ ಓಡಾಟ ಮತ್ತು ಸಮಾರಂಭಗಳಲ್ಲಿ ಭಾಗವಹಿಸುವುದು, ಜನರ ಗುಂಪುಗೂಡುವಿಕೆ ಮಾಡಬಾರದು. ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಟ್ಟುನಿಟ್ಟಾಗಿ ಪಾಲಿಸಿ ಎಂದು ವೈದ್ಯರು ಸಲಹೆ ನೀಡುತ್ತಾರೆ.

ಆದರೆ, ಜನರು ಕ್ಯಾರೇ ಎನ್ನುತ್ತಿಲ್ಲ. ಹೀಗಾಗಿ, ಸಾರ್ವಜನಿಕರೇ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಂಡು ಸರ್ಕಾರ ಸೂಚಿಸಿರುವ ಕೊರೊನಾ ನಿಯಮಗಳನ್ನು ಪಾಲಿಸಬೇಕಿದೆ.

ABOUT THE AUTHOR

...view details