ಜನಾರ್ದನ ಪೂಜಾರಿ ವಿರುದ್ದ ದ.ಕ ಜಿಲ್ಲಾ ಜೆಡಿಎಸ್ ಆಕ್ರೋಶ - ದ.ಕ ಜಿಲ್ಲಾ ಜೆಡಿಎಸ್
ಜನಾರ್ದನ ಪೂಜಾರಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಆದರೆ ಅವರು ಇತ್ತೀಚೆಗೆ ಎಸ್ ಎಂ ಕೃಷ್ಞ ತರಹ ಮಾತನಾಡುತ್ತಿದ್ದಾರೆ ಎಂದು ದ.ಕ ಜಿಲ್ಲಾ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ.
ಮಂಗಳೂರು :ಮೋದಿ ಮತ್ತೆ ಅಧಿಕಾರಕ್ಕೆ ಬರಬೇಕು ಮತ್ತು ನಾನು ಕಾಂಗ್ರೆಸ್ ಅಭ್ಯರ್ಥಿ ಎಂದು ಹೇಳುತ್ತಾ ಕೆಲವರಿಗೆ ಟಿಕೆಟ್ ನೀಡಬಾರದು ಎಂಬ ಹೇಳಿಕೆ ನೀಡಿದ ಕಾಂಗ್ರೆಸ್ ಮುಖಂಡ ಜನಾರ್ದನ ಪೂಜಾರಿ ವಿರುದ್ದ ದ.ಕ ಜಿಲ್ಲಾ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜೆಡಿಎಸ್ ದ.ಕ ಜಿಲ್ಲಾಧ್ಯಕ್ಷ ಮುಹಮ್ಮದ್ ಅವರು, ಜನಾರ್ದನ ಪೂಜಾರಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಆದರೆ ಅವರು ಇತ್ತೀಚೆಗೆ ಎಸ್ ಎಂ ಕೃಷ್ಞ ತರಹ ಮಾತನಾಡುತ್ತಿದ್ದಾರೆ. ಅವರು ಪಕ್ಷದ ಉನ್ನತ ಹುದ್ದೆ ಅನುಭವಿಸಿ ಈಗ ಮೋದಿ ಅವರನ್ನು ಹೊಗಳುವುದು, ನನಗೆ ಟಿಕೆಟ್ ನೀಡಬೇಕು, ಇಂತವರಿಗೆ ಟಿಕೆಟ್ ನೀಡಬಾರದು ಎಂದು ಹೇಳುತ್ತಿರುವುದು ಸರಿಯಲ್ಲ. ಅಭ್ಯರ್ಥಿ ಘೋಷಣೆ ಮಾಡುವುದು ಕಾಂಗ್ರೆಸ್ ಪಕ್ಷಕ್ಕೆ ಬಿಟ್ಟ ವಿಚಾರ. ಪೂಜಾರಿ ಅವರು ಹಿಂದೆ ನೀಡಿದ ಹೇಳಿಕೆಗೆ ನಾವು ಪ್ರತಿಕ್ರಿಯಿಸುತ್ತಿಲ್ಲ. ಆದರೆ ನಾವು ಈಗ ಮೈತ್ರಿ ಮಾಡಿದ್ದೇವೆ. ಅವರು ಚುನಾವಣಾ ಸಂದರ್ಭದಲ್ಲಿ ಗೊಂದಲದ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು. ಈ ಬಗ್ಗೆ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್ ಜೊತೆಗೆ ಮನವಿ ಮಾಡಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ ಬಿ ಸದಾಶಿವ, ಮಾಜಿ ಸಚಿವ ಅಮರನಾಥ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.