ಕಡಬ(ದಕ್ಷಿಣ ಕನ್ನಡ):ತಾಲೂಕಿನ ರಾಮಕುಂಜ ಗ್ರಾಮದ ಸಂಪ್ಯಾಡಿ ಕುಂಞ ಅವರ ಮನೆಯ ಮೇಲೆ ಬೃಹತ್ ಗಾತ್ರದ ಗೇರು ಮರ ಮುರಿದು ಬಿದ್ದ ಪರಿಣಾಮ ಮನೆ ಜಖಂಗೊಂಡ ಘಟನೆ ಶನಿವಾರ ಸಂಭವಿಸಿದೆ.
ಬೃಹತ್ ಗಾತ್ರದ ಗೇರು ಮರ ಬಿದ್ದು ಮನೆ ಸಂಪೂರ್ಣ ಜಖಂ - ದಕ್ಷಿಣ ಕನ್ನಡ ರಾಮಕುಂಜ ಮನೆ ಮೇಲೆ ಬಿದ್ದ ಮರ ಸುದ್ದಿ
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದ ಸಂಪ್ಯಾಡಿ ಕುಂಞ ಅವರ ಮನೆಯ ಮೇಲೆ ಬೃಹತ್ ಗಾತ್ರದ ಗೇರು ಮರ ಮುರಿದು ಬಿದ್ದು ಜಖಂಗೊಂಡ ಘಟನೆ ಶನಿವಾರ ಸಂಭವಿಸಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.

ಮನೆ ಮೇಲೆ ಬಿದ್ದ ಬೃಹತ್ ಗಾತ್ರದ ಗೇರು ಮರ
ಮನೆಯಲ್ಲಿ ಪುತ್ರರೊಂದಿಗೆ ಮಲಗಿದ್ದ ಸಂದರ್ಭದಲ್ಲಿ ಮನೆಯ ಎದುರಿಗಿದ್ದ ಮರ ಮನೆಯ ಛಾವಣಿ ಮೇಲೆ ಮುರಿದು ಬಿದ್ದಿದೆ. ಘಟನೆಯಲ್ಲಿ ಮೂವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಮನೆ ಸಂಪೂರ್ಣ ಜಖಂಗೊಂಡಿದ್ದು ವಿದ್ಯುತ್ ಉಪಕರಣಗಳು ಹಾಳಾಗಿ ಛಾವಣಿ ಸಂಪೂರ್ಣ ಕುಸಿದಿದೆ. ಘಟನಾ ಸ್ಥಳಕ್ಕೆ ರಾಮಕುಂಜ ಗ್ರಾಮ ಕರಣಿಕರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.