ಕರ್ನಾಟಕ

karnataka

ದಕ್ಷಿಣ ಕನ್ನಡದಲ್ಲಿ ಮತ್ತೊಂದು Omicron ಕೇಸ್​ ಪತ್ತೆ: ಸೋಂಕಿತರ ಸಂಖ್ಯೆ 6 ಕ್ಕೆ ಏರಿಕೆ

By

Published : Dec 20, 2021, 9:51 AM IST

ಎರಡು ದಿನಗಳ ಹಿಂದೆ ಮಂಗಳೂರಿನ ಕುರ್ನಾಡುವಿನ ಜೆಎನ್​ವಿ ಶಾಲೆಯಲ್ಲಿ ನಾಲ್ಕು ಮತ್ತು ಶ್ರೀನಿವಾಸ ನರ್ಸಿಂಗ್ ಕಾಲೇಜಿನಲ್ಲಿ ಒಬ್ಬರಿಗೆ ಒಮಿಕ್ರಾನ್ ಸೋಂಕು ಇರುವುದು ದೃಢಪಟ್ಟಿತ್ತು. ಇಂದು ಶ್ರೀನಿವಾಸ ನರ್ಸಿಂಗ್ ಕಾಲೇಜಿನ ಮತ್ತೋರ್ವ ವಿದ್ಯಾರ್ಥಿನಿಗೆ ರೂಪಾಂತರಿ ತಳಿ ಒಮಿಕ್ರಾನ್ ತಗುಲಿರುವುದು ದೃಢಪಟ್ಟಿದೆ.

ದಕ್ಷಿಣ ಕನ್ನಡ
ದಕ್ಷಿಣ ಕನ್ನಡ

ಮಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿವೆ. ಕಳೆದ 2 ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಒಮಿಕ್ರಾನ್ ಪ್ರಕರಣಗಳು ದೃಢಪಟ್ಟಿದ್ದವು. ಈ ಬೆನ್ನಲ್ಲೇ ಇದೀಗ ಮತ್ತೊಂದು ಒಮಿಕ್ರಾನ್ ಕೇಸ್​ ಪತ್ತೆಯಾಗಿರುವುದರಿಂದ ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ.

ಎರಡು ದಿನಗಳ ಹಿಂದೆ ಮಂಗಳೂರಿನ ಕುರ್ನಾಡುವಿನ ಜೆಎನ್​ವಿ ಶಾಲೆಯಲ್ಲಿ ನಾಲ್ಕು ಮತ್ತು ಶ್ರೀನಿವಾಸ ನರ್ಸಿಂಗ್ ಕಾಲೇಜಿನಲ್ಲಿ ಒಬ್ಬರಿಗೆ ಒಮಿಕ್ರಾನ್ ಸೋಂಕು ಇರುವುದು ದೃಢಪಟ್ಟಿತ್ತು. ಇಂದು ಶ್ರೀನಿವಾಸ ನರ್ಸಿಂಗ್ ಕಾಲೇಜಿನ ಮತ್ತೋರ್ವ ವಿದ್ಯಾರ್ಥಿನಿಗೆ ರೂಪಾಂತರಿ ತಳಿ ಒಮಿಕ್ರಾನ್ ತಗುಲಿರುವುದು ದೃಢಪಟ್ಟಿದೆ.

ಶ್ರೀನಿವಾಸ ನರ್ಸಿಂಗ್ ಕಾಲೇಜಿನ 19 ವಿದ್ಯಾರ್ಥಿಗಳಿಗೆ ಡಿಸೆಂಬರ್ 9 ರಂದು ಕೊರೊನಾ ಪಾಸಿಟಿವ್ ಕಂಡುಬಂದಿತ್ತು. ಇವರ ಮಾದರಿಯನ್ನು ಜಿನೋಮಿಕ್ ಅಧ್ಯಯನಕ್ಕೆ ಕಳುಹಿಸಲಾಗಿತ್ತು. ಇದರಲ್ಲಿ ಓರ್ವ ವಿದ್ಯಾರ್ಥಿನಿಗೆ ಶನಿವಾರ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇಂದು ಮತ್ತೋರ್ವ ವಿದ್ಯಾರ್ಥಿನಿಗೆ ಒಮಿಕ್ರಾನ್​ ಇರುವುದು ಗೊತ್ತಾಗಿದೆ.

ಓದಿ:Mangalore college Covid: ಮಂಗಳೂರಿನಲ್ಲಿ ಮೂರನೇ ನರ್ಸಿಂಗ್ ಕಾಲೇಜ್​ನಲ್ಲಿ ಕೊರೊನಾ ಸೋಂಕು

ಇಂದು ಒಮಿಕ್ರಾನ್ ಸೋಂಕು ದೃಢಪಟ್ಟಿರುವ ವಿದ್ಯಾರ್ಥಿನಿ ಆರೋಗ್ಯವಾಗಿದ್ದಾಳೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಈ ವಿದ್ಯಾರ್ಥಿನಿ ಸೇರಿದಂತೆ ಇತ್ತೀಚೆಗೆ ಒಮಿಕ್ರಾನ್ ಪತ್ತೆಯಾದ ವಿದ್ಯಾರ್ಥಿಗಳಿಗೆ ಟ್ರಾವೆಲ್ ಹಿಸ್ಟರಿ ಇಲ್ಲದೆ ಇದ್ದರೂ ವೈರಸ್ ಕಾಣಿಸಿಕೊಂಡಿರುವುದು ಅಚ್ಚರಿ ಮೂಡಿಸಿದೆ.

ABOUT THE AUTHOR

...view details