ಮಂಗಳೂರು:ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಕಾಮಗಾರಿ ನಡೆಸಿದರೂ ನಗರದ ಮಂಗಳಾದೇವಿ ಸಮೀಪದ ಗುಜ್ಜರಕೆರೆಯ ನೀರು ಇನ್ನೂ ಕುಡಿಯಲು ಯೋಗ್ಯವಾಗಿಲ್ಲ ಎಂದು ಲ್ಯಾಬ್ ವರದಿ ತಿಳಿಸಿದೆ. ಸ್ಮಾರ್ಟ್ ಸಿಟಿಯಿಂದ ಇತ್ತೀಚೆಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಅಭಿವೃದ್ಧಿಪಡಿಸಲಾಗಿತ್ತು. ಆದರೆ ಇದೀಗ ಗುಜ್ಜರಕೆರೆಯ ನೀರಿನಲ್ಲಿ ಅಪಾಯಕಾರಿ ಬ್ಯಾಕ್ಟೀರಿಯಾ ಅಂಶಗಳು ಇರುವುದು ಲ್ಯಾಬ್ ವರದಿಯಲ್ಲಿ ಪತ್ತೆಯಾಗಿದೆ.
ಐತಿಹಾಸಿಕ ಕುರುಹು ಇರುವ ಗುಜ್ಜರಕೆರೆ ಹಲವು ವರ್ಷಗಳಿಂದ ಹೂಳು ತುಂಬಿ ಇದರ ಅಭಿವೃದ್ಧಿ ನೆನೆಗುದಿಗೆ ಬಿದ್ದಿತ್ತು. ಹಲವಾರು ವರ್ಷಗಳ ಹೋರಾಟದ ಬಳಿಕ ಸ್ಮಾರ್ಟ್ ಸಿಟಿ ಯೋಜನೆಯ ಮೂಲಕ ಕೆರೆಯನ್ನು ಪುನರ್ ಅಭಿವೃದ್ಧಿಪಡಿಸಲಾಗಿತ್ತು. ಆ ಬಳಿಕ ಇದು ಪ್ರವಾಸಿ ಆಕರ್ಷಣೀಯ ಕೇಂದ್ರವಾಗಿಯೂ, ವಾಯುವಿಹಾರಿಗಳಿಗೆ ನೆಚ್ಚಿನ ತಾಣವಾಗಿ ಮಾರ್ಪಾಡಾಗಿತ್ತು. ಆದರೆ ಸಾಕಷ್ಟು ಕೋಟಿ ರೂ. ವೆಚ್ಚದಿಂದ ಗುಜ್ಜರಕೆರೆ ಅಭಿವೃದ್ಧಿಗೊಂಡರೂ, ಕೆರೆಯ ನೀರು ಮಾತ್ರ ಇನ್ನೂ ಬಳಕೆಗೆ ಯೋಗ್ಯವಾಗದಂತಾಗಿದೆ.